Advertisement

ಬ್ರಹ್ಮಾವರದಲ್ಲಿ ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣ: ಇಬ್ಬರ ಬಂಧನ; ಕೇರಳದಲ್ಲಿ ಕೆಲಸಕ್ಕೆ ಇಟ್ಟುಕೊಂಡು ದೌರ್ಜನ್ಯ ಎಸಗಿದ ದುಷ್ಕರ್ಮಿಗಳು

ಉಡುಪಿ ಬ್ರಹ್ಮಾವರದ ಮಟಪಾಡಿ ಗ್ರಾಮದ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರ ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್‌ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಜೂನ್ 1ರಂದು ಬೆಳಿಗ್ಗೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಬಾಲಕನನ್ನು ಅಪಹರಿಸಿ ಕೇರಳದ ತಲಪಾಡಿ ಸಮೀಪದ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪೆನಿಗೆ ಬಲವಂತವಾಗಿ ಕರೆದೊಯ್ದು ಕೆಲಸಕ್ಕೆ ಸೇರಿಸಿದ್ದರೆಂದು ಆರೋಪಿಸಲಾಗಿದೆ.

ಮನೆಗೆ ಹೋಗುವುದಾಗಿ ಬಾಲಕ ಹೇಳಿದರೂ ಬಿಡದೆ, ಜೂನ್ 9ರಂದು ಆರೋಪಿಗಳಲ್ಲಿ ಒಬ್ಬನು ವೈರ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮತ್ತೊಬ್ಬ ಆರೋಪಿ ಚೂರಿ ತೋರಿಸಿ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಈ ಘಟನೆಯನ್ನು ಮತ್ತೋರ್ವ ಆರೋಪಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 117/2026ರಡಿ ವಿವಿಧ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿಗಳಾದ ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಅವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಪ್ರಕರಣದ ಮೂರನೇ ಆರೋಪಿ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions