ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತಬೇಕು ಎಂದು ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ರೋಣ್ ಅವರು ಅಭಿಪ್ರಾಯಪಟ್ಟರು, ಅವರು ನಗರದಲ್ಲಿ ಸಿಐಓ ವತಿಯಿಂದ ಅಯೋಜಿಸಿದ್ದ “ಹ್ಯಾಂಡ್ಸ್ ಆನ್ ಸಾಯ್ಲ್, ಹಾರ್ಟ್ ವಿದ್ ಇಂಡಿಯಾ” - “ಕೈಯಲ್ಲಿ ಮಣ್ಣು-ಹೃದಯದಲ್ಲಿ ಭಾರತ” ಎಂಬ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ ಒಂದು ತಿಂಗಳಿನಿಂದ ರಾಷ್ಟ್ರಾದ್ಯಂತ ಚಿಲ್ಡ್ರನ್ಸ್ ಸರ್ಕಲ್ ಇಸ್ಲಾಮಿಕ್ ಆರ್ಗನೈಝೇಶನ್ (ಸಿಐಓ) ವತಿಯಿಂದ ಮಕ್ಕಳ ಮೂಲಕ ಪರಿಸರ ಜಾಗೃತಿ, ಪ್ರಕೃತಿ ಸಂರಕ್ಷಣೆಯ ಕುರಿತು ವೈವಿದ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳು ತಮ್ಮ ತಮ್ಮ ಪರಿಸರದಲ್ಲಿ, ಶಾಲಾ-ಕಾಲೇಜು, ಕಛೇರಿ ಪಾರ್ಕು, ಉದ್ಯಾನವನ, ಮಸೀದಿ, ಮದ್ರಸಾ, ಮಂದಿರ, ಚರ್ಚ್ ವೃದ್ಧಾಶ್ರಮಗಳ ವಠಾರದಲ್ಲಿ ತೆರಳಿ ಗಿಡ ನೆಡುವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಭಾಷಣಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪತ್ರಿಕಾಗೋಷ್ಠಿ, ರ‍್ಯಾಲಿಗಳ ಮೂಲಕ ಜಾಗೃತಿ ಮೂಡಿಸುವ ವೈವಿದ್ಯಮ ಕಾರ್ಯಕ್ರಮಗಳನ್ನು ಹಮಿಕೊಂಡಿದ್ದರು. ಉಡುಪಿ ಜಿಲ್ಲೆಯಲ್ಲೂ ಮಕ್ಕಳು ಸಕ್ರೀಯವಾಗಿ ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು ಮತ್ತು ಉಡುಪಿ ಜಿಲ್ಲೆಯಾದ್ಯಂತ 3,000ಕ್ಕೂ ಮಿಕ್ಕಿ ಗಿಡಗಳನ್ನು ನೆಡಲಾಯಿತು.
ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಿಐಓ ರಾಜ್ಯಘಟಕ ಸದಸ್ಯೆ ಮೆಹರುನ್ನಿಸಾ ಮಣಿಪಾಲ್, ಜಮಾಅತೆ ಇಸ್ಲಾಮೀ ಹಿಂದ್‌ನ ಉಡುಪಿ ನಗರ ಶಾಖೆಯ ಅಧ್ಯಕ್ಷ ನಿಸಾರ್ ಅಹಮದ್, ಮಹಿಳಾ ವಿಭಾಗದ ಅಧ್ಯಕ್ಷೆ ವಾಜಿದಾ ತಬಸ್ಸುಮ್ ಉಪಸ್ಥಿತರಿದ್ದರು. ನೂರ್‌ಜಹಾನ್ ಕಟಪಾಡಿ ಪ್ರಸ್ತಾವನೆಗೈದರು. ಶಮ್ಶಾದ್ ಹಸನ್ ನಿರೂಪಣೆಗೈದು ಕೊನೆಯಲ್ಲಿ ಧನ್ಯವಾದವಿತ್ತರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions