ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಾಯಕರು ಮಂಜೆಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು.


ಮಂಜೆಶ್ವರ ಕ್ಷೇತ್ರದ ಪಯ್ಯೋಲಿಕೆ, ಬಾಯ್ಯಾರ್, ಲಾಲ್ ಬಾಗ್ ಹಾಗೂ ಕರಂಬಾರ್ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಹನೀಫ್ ಗುಲ್ವಾಡಿ, ರಮೀಝ್ ಹುಸೈನ್ ಮತ್ತು ಮುನಾಫ್ ಕೋಡಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಸಾಹುಲ್ ಹಮೀದ್ ಬಜ್ಪೆ ಹಾಗೂ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮೋನು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು.

ಸಭೆಯಲ್ಲಿ ನಾಯಕರು ಮಾತನಾಡಿ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions