ಕರಾವಳಿ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷರಾಗಿ ಎಂ ಎ ಗಫೂರ್ ನೇಮಕ ಖುಷಿ ತಂದಿದೆ. ಕಾಂಗ್ರೆಸ್ ಪಕ್ಷ ಯಾವತ್ತೂ ಎಲ್ಲಾ ಸಮುದಾಯದವರಿಗೂ ಅವಕಾಶ ನೀಡುತ್ತದೆ.
ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 40 ವರ್ಷಗಳ ಕಾಲ ನಿಷ್ಟಾಂವತರಾಗಿ ಸೇವೆ ಸಲ್ಲಿಸದ ಕೀರ್ತಿ ಎಂ ಎ ಗಫೂರ್ ರವರಿಗೆ ಸಲ್ಲುತ್ತದೆ. ಕೇಂದ್ರದ ಮಾಜಿ ಮಂತ್ರಿಗಳಾದ ದಿವಂಗತ ಆಸ್ಕರ್ ಫೆರ್ನಾಂಡೀಸ್ ರವರ ಆಪ್ತರಲ್ಲಿ ಗುರುತಿಸಿಕೊಂಡು ಜಿಲ್ಲೆಯಲ್ಲಿ ಎಲ್ಲಾ ನಾಯಕರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಇವರು, ಕಳೆದ ಸಿದ್ದರಾಮಯ್ಯರವರ ಸರಕಾರದಲ್ಲಿ ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 3 ಅವಧಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕೆಲಸ ಮಾಡಿದ ಅಪಾರ ಅನುಭವ ಅವರಿಗಿದೆ.
ಈಗ ನಮ್ಮೆಲ್ಲರ ನಿರೀಕ್ಷೆಯಂತೆ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡು ಜಿಲ್ಲೆಯ ಅಲ್ಪಸಂಖ್ಯಾತ ನಾಯಕನಿಗೆ ಸಿದ್ದರಾಮಯ್ಯರವರ ಸರಕಾರ ಸ್ಥಾನಮಾನ ನೀಡಿದ್ದು ಮತ್ತು ನಾರಾಯಣ ಗುರು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಕಳದ ಮಂಜುನಾಥ ಪೂಜಾರಿಯವರನ್ನು ನೇಮಕ ಮಾಡಿರುವಂತದ್ದು, ನಮಗೆಲ್ಲಾ ಅತ್ಯಂತ ಖುಷಿತಂದಿದೆ ಪಕ್ಷ ನಿಷ್ಠೆ, ತತ್ವ ಸಿದ್ದಾಂತದಲ್ಲಿ ಕೆಲಸ ಮಾಡಿದವರಿಗೆ ಕಾಂಗ್ರೆಸ್ ಪಕ್ಷ ಯಾವತ್ತೂ ಕಡೆಗಣಿಸುವುದಿಲ್ಲ.
ರಾಜ್ಯದಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸರಕಾರದಲ್ಲಿ ಸ್ಥಾನಮಾನ ನೀಡಿರುವುದಕ್ಕೆ ಸರಕಾರಕ್ಕೆ ಹಾಗೂ ಮಾನ್ಯ ಮುಖ್ಯ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions