ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಯವರ ಜೊತೆ ಸೇರಿ ಸೈಫ್ ಜಾಕೇಟ್ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ ಕಡಲು ಉಕ್ಕೇರಿ ಪ್ರಭುದ್ದವಾಗಿರುತ್ತದೆ. ಈಜು ಬರುತ್ತದೆ ಎಂದು ಹೇಳಿ ಯಾರೂ ಸಹ ನೀರಿಗೆ ಇಳಿಯಬೇಡಿ. ಯಾವ ಕ್ಷಣದಲ್ಲಿ ಅಲೆಗಳು ಮೇಲುಕ್ಕಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಎಲ್ಲಾ ಮೀನಿಗಾರರು ಲೈಫ್ ಜಾಕೇಟ್ ಹಾಕಿಯೇ ಮೀನುಗಾರಿಕೆಗೆ ಹೋಗಿ ಎಂದು ಈಶ್ವರ್ ಮಲ್ಪೆ ಹೇಳಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions