Advertisement

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ” ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”, “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು - 560 001 ಅಥವಾ ಇ-ಮೇಲ್ ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions