Advertisement

ಕಾರ್ಕಳ ಕಾಂಗ್ರೆಸ್ ಕಚೇರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಕಾರ್ಕಳ: ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.

ಕಾರ್ಕಳದ ಕಾಂಗ್ರೆಸ್ ಕಚೇರಿಯಲ್ಲಿ ‌ಶುಕ್ರವಾರ ಮಾತನಾಡಿದ ಸಚಿವರು, ಕಳೆದ ಬಾರಿಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉದಯ್ ಶೆಟ್ಟಿ ಅವರಿಗೆ ಗೆಲ್ಲಲು ಉತ್ತಮ ಅವಕಾಶಗಳಿದ್ದವು. ಆದರೆ, ಅದೃಷ್ಟ ಕೈಹಿಡಿಯಲಿಲ್ಲ. ಮುಂದಿನ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ವಾತಾವರಣವಿದೆ ಎಂದರು.

ನಾನು ಎರಡೂ ಬಾರಿ‌ ಸೋತರೂ ಜನರ ನಡುವೆ ಉತ್ತಮ ಒಡನಾಟ ಬೆಳೆಸಿಕೊಂಡ ಫಲವಾಗಿ ಸತತ ಎರಡು ಭಾರಿ ಅಂತರದಿಂದ ಜನರು ಗೆಲ್ಲಿಸಿದರು. ಸೋಲೇ ಗೆಲುವಿನ ಮೆಟ್ಟಿಲು, ಉದಯ್ ಶೆಟ್ಟಿ ಅವರು ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಮುಂದಿನ ಬಾರಿ ಅವರ ಗೆಲುವು ಶತಸಿದ್ಧ ಎಂದು ಸಚಿವರು ಹೇಳಿದರು.

* ಪತ್ರಿಕಾ ಭವನಕ್ಕೆ ನಿವೇಶನದ ಭರವಸೆ

ಇದಕ್ಕೂ ಮುನ್ನ ಸಚಿವರು ಕಾರ್ಕಳದ ನೂತನ ಪತ್ರಿಕಾ ಭವನಕ್ಕೆ ಭೇಟಿ‌ ಕೊಟ್ಟರು. ‌ಇದೇ ವೇಳೆ ಸಚಿವರನ್ನು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪತ್ರಿಕಾ ಭವನ ನಿರ್ಮಾಣಕ್ಕೆ ಸಂಘದವರೇ ಈಗಾಗಲೇ 2.5. ಗುಂಟೆ ಜಾಗ ಗುರುತಿಸಲಾಗಿದ್ದು, ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ನಿವೇಶನ ಹಂಚಿಕೆ ಮಾಡಬಹುದು. ಈ ಕುರಿತು ಪರಿಶೀಲಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು‌ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ ಅವರಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಮುಖಂಡರಾದ ಉದಯ್ ಶೆಟ್ಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ‌ಅಜಿತ್‌ ಹೆಗ್ಡೆ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಮೊಹಮದ್ ಶರೀಷ್ ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions