ವಕೀಲ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಕ್ಷಿಗಳು ಮತ್ತು ಕಕ್ಷಿಗಾರರೊಂದಿಗೆ ಉತ್ತಮ ಬಾಂಧವ್ಯ, ಸಮರ್ಪಕ ವಾದಪತ್ರಗಳ ರಚನೆ ಹಾಗೂ ಮೌಖಿಕ ವಾಕ್‌ಚಾತುರ್ಯ ಮಾತ್ರವಲ್ಲದೆ ಸಹಾನುಭೂತಿ ಮತ್ತು ಮಾನವೀಯತೆ ಅತ್ಯಂತ ಅಗತ್ಯವೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಎಂ.ಜಿ. ಉಮಾ ಅಭಿಪ್ರಾಯಪಟ್ಟರು.
ಅವರು ಉಡುಪಿಯ ವೈಕುಂಠಬಾಳಿಗಾ ಕಾನೂನು ಕಾಲೇಜಿನಲ್ಲಿ ಆಯೋಜಿಸಲಾದ 10ನೇ ವರ್ಷದ ಅಡ್ವೊಕೇಟ್ ಪಿ. ಶಿವಾಜಿ ಶೆಟ್ಟಿ ಸ್ಮಾರಕ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಇಂತಹ ಅಣಕು ನ್ಯಾಯಾಲಯ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವಕೀಲ ವೃತ್ತಿಗೆ ಅಗತ್ಯವಾದ ಕೌಶಲ್ಯಗಳನ್ನು ಅರಿತುಕೊಳ್ಳಲು ಇದು ಪ್ರಾಯೋಗಿಕ ಮಾರ್ಗದರ್ಶನ ಒದಗಿಸುತ್ತದೆ ಎಂದು ಹೇಳಿದರು.
ಬೆಂಗಳೂರಿನ ಆಲೆಯನ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಕಾನೂನು ಕಾಲೇಜಿನ ಪ್ರಾಕ್ತನ ಪ್ರಾಂಶುಪಾಲರಾದ ಪ್ರೊ. (ಡಾ.) ಪ್ರಕಾಶ್ ಕಣಿವೆ ಮುಖ್ಯ ಅತಿಥಿಯಾಗಿ ಭಾಗವಹಿಸಿ, ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಗಳ ಆರಂಭಿಕ ಹಂತಗಳ ಕುರಿತು ವಿವರಿಸಿದರು.
ವಿಬಿಸಿಎಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಖ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿ. ಪಿ. ಶಿವಾಜಿ ಶೆಟ್ಟಿ ಅವರ ಧರ್ಮಪತ್ನಿ ಜಯಂತಿ ಶಿವಾಜಿ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ರೋಹಿತ್ ಎಸ್. ಅಮೀನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ್ ಪಿ.ಎಸ್., ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀನಿವಾಸ ಪ್ರಸಾದ್ ಹಾಗೂ ಅಣಕು ನ್ಯಾಯಾಲಯ ಸಮಿತಿಯ ಕಾರ್ಯದರ್ಶಿಗಳಾದ ಸಾಯಿ ರಮ್ಯ ಮತ್ತು ಅಪರ್ಣಲಕ್ಷ್ಮೀ ಉಪಸ್ಥಿತರಿದ್ದರು.
ಶ್ರೀನಿಧಿ ಪ್ರಾರ್ಥನೆ ಸಲ್ಲಿಸಿದರು. ರಿಶಾಲಿ ವಂದಿಸಿದರು. ಸಿಮ್ರಾನ್ ಕಾರ್ಯಕ್ರಮ ನಿರೂಪಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions