ಓರ್ವ ಮನುಷ್ಯನಿಗೆ ಲೋಕದಲ್ಲಿರುವ ಎಲ್ಲಾ ಸಂಪತ್ತು ಇದ್ದು, ಆತನ ಬಳಿ ವಿದ್ಯೆ ಇಲ್ಲದಿದ್ದರೆ ಆತನ ಬದುಕು ಬರೀ ಶೂನ್ಯ. ಕೇವಲ ಸಂಪತ್ತಿನಿಂದ ಅವನಿಗೆ ಏನೂ ಸಾಧಿಸಲು ಸಾಧ್ಯವಾಗುದಿಲ್ಲ. ಮಾನವನು ವಿದ್ಯೆಯ ಮೂಲಕ ಜ್ಞಾನ ಗಳಿಸಲು ಪ್ರಯತ್ನಿಸಬೇಕು, ಅದಕ್ಕಾಗಿ ಆತನು ಎಷ್ಟು ದೂರ ಪ್ರಯಾಣ ಮಾಡಬೇಕಾದರೂ ಅದಕ್ಕಾಗಿ ಸಿದ್ದನಾಗಿರಬೇಕು. ಲೌಕಿಕ ಜ್ಞಾನ ಗಳಿಸುದರೊಂದಿಗೆ, ಧಾರ್ಮಿಕ ಜ್ಞಾನವನ್ನು ಕೂಡಾ ಅಷ್ಟೇ ಮುತುವರ್ಜಿಯಿಂದ ಗಳಿಸಬೇಕು. ದೇವನ ವತಿಯಿಂದ ಬಂದ ಕೊನೆಯ ಗ್ರಂಥ ಕುರ್ ಆನ್ ಆಗಿದ್ದು, ಅದರಲ್ಲಿ ಇರುವ ಮೊದಲ ವಾಕ್ಯವೇ ಜ್ಞಾನ ಗಳಿಸುವ ಕುರಿತಾಗಿದೆ. ಎಂದು ಆಯಿಷಾ ಮಸ್ಜಿದ್ ನೆಜಾರ್ ನ ಧರ್ಮ ಗುರುಗಳಾದ ಮೌಲಾನ ಆದಿಲ್ ನದ್ವಿ ಯವರು ಹೇಳಿದರು.
ಅವರು ಕಾಪು ಕೆ. ಒನ್ ಹೋಟೆಲ್ ನ ಸಭಾಂಗಣ ದಲ್ಲಿ ಬೋರ್ಡ್ ಆಫ್ ಇಸ್ಲಾಮಿಕ್ ಕರ್ನಾಟಕ ಕಾಪು ಸೆಂಟರ್ ಹಮ್ಮಿ ಕೊಂಡ್ಡ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು.
ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿರುವ ಜಮಾ ಅತೆ ಇಸ್ಲಾಮಿ ಹಿಂದ್ ನ ಸದಸ್ಯೆ ರೇಷ್ಮಾ ಬೈಲೂರು ರವರು, ಮನುಷ್ಯನು ಭೂಮಿಗೆ ಬಂದ ಉದ್ದೇಶವೇನು? ಬಂದ ನಂತರ ಏನು ಮಾಡಬೇಕು? ಮರಣದ ನಂತರದ ಬದುಕಿಗೆ ಇಹಲೋಕದಲ್ಲಿ ಯಾವ ಕೆಲಸ ಮಾಡಬೇಕು ಎಂಬುದರ ಬಗ್ಗೆ ನಾವು ಅಧ್ಯಯನ ಮಾಡಬೇಕು. ಮತ್ತು ಈ ಅಧ್ಯಯನದಿಂದ ಸಿಗುವ ಜ್ಞಾನವನ್ನು ತನ್ನಲ್ಲಿ ಅಳವಡಿಸಿಕೊಂಡ್ಡು ಅದರ ಪ್ರಯೋಜನ ಸಮಾಜದಲ್ಲಿರುವ ಇತರರಿಗೂ ಸಿಗಬೇಕು. ಆವಾಗ ಮಾತ್ರ ಆತ ಗಳಿಸಿದ ಜ್ಞಾನ ಸಾರ್ಥಕವಾಗುವುದು ಎಂದು ಹೇಳಿದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿಕೊಂಡ್ಡ ಜಮಾ ಅತೆ ಇಸ್ಲಾಮಿ ಹಿಂದ್ ಕಾಪು ವರ್ತುಲದ ಅಧ್ಯಕ್ಷರಾದ ಅನ್ವರ್ ಅಲಿಯವರು, ಜಮಾ ಅತೆ ಇಸ್ಲಾಮಿ ಹಿಂದ್ ಈ ರಾಷ್ಟ್ರದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ, ಕೆಡುಕನ್ನು ಅಳಿಸಿ ಒಳಿತನ್ನು ಸಂಸ್ಥಾಪಿಸುವ, ಯುವ ಪೀಳಿಗೆಯನ್ನು ನೈತಿಕ ಮೇರೆಯಲ್ಲಿ ಮುನ್ನಡೆಸುವ, ಸಮಾಜದಲ್ಲಿ ಶಾಂತಿ, ಪ್ರೀತಿ ಸೌಹಾರ್ಧತೆ ಕಾಪಿಡುವ ಕೆಲಸ ಮಾಡುತ್ತಿದೆ ಇದರೊಂದಿಗೆ ತಮ್ಮನ್ನು ತೊಡಗಿಸಿಕೊಳ್ಳಿ ಎಂದರು.
ಕಾರ್ಯಕ್ರಮವು ಫರಾನ ಬೇಗಮ್ ರವರ ಕುರ್ ಆನ್ ಪಠಣ ದೊಂದಿಗೆ ಪ್ರಾರಂಭವಾಯಿತು. ಮುಹಮ್ಮದ್ ಶರೀಫ್ ಶೇಕ್ ರವರು ಅತಿಥಿಗಳನ್ನು ಸ್ವಾಗತಿಸಿದರು. ಬಿ. ಐ. ಇ.ನ ಸಂಚಾಲಕಿ ಶೇಹೇನಾಜ್ ರವರು ಪ್ರಾಸ್ತವಿಕ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಾಕೀರ್ ಹುಸೈನ್, ಆಸೀಫ್ ಜಿ. ಡಿ, ಅಷ್ಫಾಕ್ ಅಹಮದ್ ಮುಜಾವರ್ ರವರು, ಬಿ. ಐ. ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ ರಾದವರಿಗೆ ಅಭಿನಂದಿಸುತ್ತಾ , ಪ್ರಶಸ್ತಿ ಮತ್ತು ಸರ್ಟಿಫಿಕೇಟ್ ಮತ್ತು ಎಸ್. ಐ. ಓ ಮತ್ತು ಜಿ. ಐ. ಓ ವರ್ತುಲದಲ್ಲಿ ಭಾಗವಹಿಸುವ ವಿದ್ಯಾರ್ಥಿ, ವಿದ್ಯಾರ್ಥಿನಿ ಯವರು ಎಸ್. ಎಸ್ ಎಲ್ ಸಿ ಯಲ್ಲಿ ಮತ್ತು ಪಿ. ಯು. ಸಿ ಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಗಳಿಸಿದ್ದವರಿಗೆ ಸನ್ಮಾನಿಸಿದರು ಹಾಗೂ ಸಿ. ಐ. ಓ ನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮವನ್ನು ಮೆಹರೂಫ ರವರು ನಿರೂಪಿಸಿದರು.
ಸಯ್ಯದ್ ಮುಸ್ತಖೀಮ್ ರವರು ಧನ್ಯವಾದ ನೀಡಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions