ರಾಜ್ಯಾದ್ಯಂತ ಬಹು ಚರ್ಚಿತವಾಗಿರುವ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮುಷ್ತಾಕ್ ಹೆನ್ನಾಬೈಲ್ ಬರೆದಿರುವ "ಧರ್ಮಾಧರ್ಮ" ಪುಸ್ತಕ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ಆಗಸ್ಟ್ 8ರ ಶುಕ್ರವಾರದಂದು ಉಡುಪಿಯ ಹೃದಯ ಭಾಗದಲ್ಲಿರುವ ಜಾಮಿಯಾ ಮಸೀದಿಯಲ್ಲಿ ಜುಮಾ ನಮಾಜಿನ ನಂತರ ಏರ್ಪಡಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸೌಹಾರ್ದ ಪ್ರಕಾಶನ ಹೊರತಂದಿರುವ ಈ ಪುಸ್ತಕ ಸ್ವತಂತ್ರ ಭಾರತದ ಇತಿಹಾಸದಲ್ಲಿ ಮುಸ್ಲಿಮರಿಗೆ ಕೇಳಲ್ಪಟ್ಟ ಮತ್ತು ವಿವಾದವಾಗಿಸಲ್ಪಟ್ಟ 58 ಪ್ರಮುಖ ಪ್ರಶ್ನೆಗಳಿಗೆ ಈ ಪುಸ್ತಕದಲ್ಲಿ ಪ್ರಬಲ ಉತ್ತರವಿರುತ್ತದೆ. ಭವಿಷ್ಯದ ದೃಷ್ಟಿಯಿಂದ ಈ ಪುಸ್ತಕದ ಜ್ಞಾನ ಸಮುದಾಯದ ಸರ್ವರಿಗೂ ಅಗತ್ಯವಿರುವುದರಿಂದ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಪುಸ್ತಕ ಪ್ರದರ್ಶನವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions