Advertisement

ಪಡುಬಿದ್ರಿ | ಸೆ - 12ರಂದು‌ "ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್"

ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ರಾಜ್ಯ ಸಮಿತಿ ವತಿಯಿಂದ ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 12ರ ಶುಕ್ರವಾರ ಸಂಜೆ ಮಂಗಳೂರಿನ ಇಂಡಿಯಾನ ಕನ್ವೆನ್ನನ್ ಹಾಲ್‌ನಲ್ಲಿ "ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025" ಆಯೋಜಿಸಲಾಗಿದೆ. ಈ ಕಾರ್ಯಕ್ರದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೇರಿದಂತೆ ಹಲವಾರು ಸಮುದಾಯದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಯುನೈಟೆಡ್ ಎಂಪವರ್ ಮೆಂಟ್ ಅಸೋಸಿಯೇಶನ್ ವತಿಯಿಂದ ಇಂದು ಪಡುಬಿದ್ರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ (UEA) ಕ್ರೀಡೆಗಳ ಮೂಲಕ ಸಮುದಾಯದ ಸಬಲೀಕರಣ ಮತ್ತು ಅಭಿವೃದ್ಧಿಯತ್ತ ಕೊಂಡುಹೋಗುವ ಸಂಸ್ಥೆಯಾಗಿದೆ. ಎಲ್ಲಾ ವಿಧದ ಕ್ರೀಡಾಪಟುಗಳನ್ನು ಸಿದ್ದಪಡಿಸಿ, ಸ್ಪರ್ಧಾತ್ಮಕ ಮಟ್ಟದಲ್ಲಿ ಭಾಗವಹಿಸಲು ಉತ್ತೇಜಿಸುವುದು ಇದರ ಉದ್ದೇಶವಾಗಿದೆ. ಭಾರತೀಯ ಸೊಸೈಟಿ ಕಾಯ್ದೆಯಡಿ ನೋಂದಾಯಿತವಾದ ಈ ಸಂಸ್ಥೆ ಕರ್ನಾಟಕದಲ್ಲಿ ಕ್ರೀಡೆ ಮತ್ತು ಆಟಗಳನ್ನು ಬೆಳೆಸಲು ಶ್ರಮಿಸುತ್ತಿದೆ. ಕ್ರೀಡಾ ಕ್ಷೇತ್ರದಲ್ಲಿ ಪ್ರಮುಖ ಧ್ವನಿಯಾಗಿ ಹೊರಹೊಮ್ಮಲು ಬದ್ಧವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಈಗಾಗಲೇ ಸುಮಾರು 21 ವಲಯ ಸಮಿತಿ ರಚಿಸಲಾಗಿದ್ದು 7000ಕ್ಕೂ ಅಧಿಕ ಸದಸ್ಯರೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಕ್ರೀಡಾಪಟುಗಳ ಜೀವನದಲ್ಲಿ ಕಾರ್ಯಬದ್ಧ ಒಕ್ಕೂಟವನ್ನು ನಿರ್ಮಿಸಿ, ಬೆಳೆಸಿ, ಮುನ್ನಡೆಸುವ ಗುರಿ ಇಟ್ಟುಕೊಂಡಿದೆ. UEA ಕ್ರಿಕೆಟ್. ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಶಟಲ್ ಬ್ಯಾಡ್ಮಿಂಟನ್, ಚೆಸ್. ಕ್ಯಾರಂ, ಟೇಬಲ್ ಟೆನ್ನಿಸ್, ಖೋ-ಖೋ, ಪ್ರೋ ಬಾಲ್, ಕುಸ್ತಿ, ಕರಾಟೆ. ಜುಡೋ. ಓಟ. ಜಂಪಿಂಗ್. ಪ್ರೋ ಹಾಗೂ ಸ್ಟೇಟಿಂಗ್ ಮುಂತಾದ ವಿವಿಧ ಕ್ರೀಡಾಪಟುಗಳ ಪುರೋಗತಿಗಾಗಿ ಶ್ರಮಿಸಲಿದೆ ಎಂದು ಹೇಳಿದರು.

ಸಮುದಾಯದ ಪ್ರತಿಯೊಬ್ಬರೂ ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭವಿಷ್ಯ ರೂಪಿಸುವ ಶಕ್ತಿ ಹೊಂದಿರುವ ನಮ್ಮ ಯುವಕರನ್ನು ಪ್ರೇರೇಪಿಸಲು ಹಾಗೂ ಉತ್ತೇಜಿಸುತ್ತಿದ್ದು, ಪಡುಬಿದ್ರಿ ಭಾಗದಿಂದ ಬರುವವರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಅಧ್ಯಕ್ಷರಾದ ಅಬ್ದುಲ್ ರಝಾಕ್, ರಾಜ್ಯ ಕಮಿಟಿ ಸದಸ್ಯರಾದ ರಮೀಝ್ ಹುಸೈನ್, ರಿಯಾಝ್ ಮುದ್ರಂಗಡಿ, ಸೈಯದ್ ಹುಸೈನ್, ಮಾಧ್ಯಮ ಕಾರ್ಯದರ್ಶಿ ನಿಯಾಝ್, ಸದಸ್ಯರುಗಾಳಾದ ಮನ್ಸೂರ್, ಝಹೀರ್, ನಿಝಾಮ್, ಇರ್ಫಾನ್, ಅಯಾಝ್, ತಂಝೀಲ್ ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions