Advertisement

ಪಂಚವರ್ಣ ಸಂಘಟನೆಯ 55ನೇ 'ರೈತರೆಡೆಗೆ ನಮ್ಮ ನಡಿಗೆ' : ರೈತ ಪುರಸ್ಕಾರಕ್ಕೆ ಗುಳ್ಳಾಡಿ ಆನಂದ್ ಪೂಜಾರಿ ಭಾಜನ

ಕೋಟ : ಪಂಚವರ್ಣ ಸಂಘಟನೆಯಿಂದ ರೈತ ಪರಿಸರಸ್ನೇಹಿ ಕಾರ್ಯಕ್ರಮಗಳು ಜನಮನ್ನಣೆ ಗಳಿಸಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.

ಶುಕ್ರವಾರ ಕೋಟದ ಪಂಚವರ್ಣ ಯುವಕ‌ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ರೈತಧ್ವನಿ ಸಂಘ ಕೋಟ,ಗೆಳೆಯರ ಬಳಗ ಕಾರ್ಕಡ,ಸ್ನೇಹಕೂಟ ಮಣೂರು,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ 55ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಡೀ ದೇಶಕ್ಕೆ ಮಾದರಿ ಕಾರ್ಯಕ್ರಮಗಳನ್ನು ಈ ಪಂಚವರ್ಣ ಸಂಘಟನೆ ನೀಡುತ್ತಿದೆ.ಇಂತಹ ಸಂಘಟನೆ ರೈತಪರ ಅಥವಾ ತಳಮಟ್ಟದ ರೈತಸಮುದಾಯವನ್ನು ಗುರುತಿ ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರಲ್ಲದೆ ಆನಂದ್ ಪೂಜಾರಿ ಕೃಷಿ ಕ್ಷೇತ್ರಕ್ಕೆ ಹೊಸ ಆವಿಷ್ಕಾರವನ್ನು ಧಾರೆ ಎರೆದಿದ್ದಾರೆ ಎಂದರು.

ಇದೇ ವೇಳೆ 55ನೇ ರೈತ ಪುರಸ್ಕಾರವನ್ನು ಕೋಟತಟ್ಟು ನಿವಾಸಿ ಗುಳ್ಳಾಡಿ ಆನಂದ್ ಪೂಜಾರಿ ಇವರನ್ನು ಕೃಷಿ ಪರಿಕರವನ್ನಿತ್ತು ಗೌರವಿಸಲಾಯಿತು.

ಪ್ರಾರಂಭದಲ್ಲಿ ಪರಿಸರಸ್ನೇಹಿ ಹಸಿರು ಗಿಡವನ್ನು ನೆಟ್ಟು,ಗೋ ಪೂಜೆ ನೆರವೆರಿಸಿ ಕಾರ್ಯಕ್ರಮಕ್ಕೆ ಕೋಟತಟ್ಟು ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು.

ರೈತ ಪುರಸ್ಕಾರವನ್ನು ಸಕಡ್ ಫೌಂಡೇಶನ್ ಮುಖ್ಯಸ್ಥ ಕೋಟ ಶ್ರೀಕಾಂತ್ ಶೆಣೈ ನೆರವೆರಿಸಿದರು.

ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜಿತ್ ಕುಮಾರ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ‌.ತಾರಾನಾಥ ಹೊಳ್ಳ,ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸನ್ಮಾನಪತ್ರವಾಚಿಸಿದರು. ಕಾರ್ಯಕ್ರಮವನ್ನು ಸದಸ್ಯರಾದ ಪ್ರಭಾಕರ್ ಮಣೂರು ನಿರೂಪಿಸಿದರು. ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

ಕೋಟದ ಪಂಚವರ್ಣ ಯುವಕ‌ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 55ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಕೋಟತಟ್ಟು ನಿವಾಸಿ ಗುಳ್ಳಾಡಿ ಆನಂದ್ ಪೂಜಾರಿ ಇವರನ್ನು ಕೃಷಿ ಪರಿಕರವನ್ನಿತ್ತು ಗೌರವಿಸಲಾಯಿತು.ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್, ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜಿತ್ ಕುಮಾರ್,ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಇದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions