ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ. ಒಳಮೀಸಲಾತಿ ವಿಚಾರದಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾದರೂ, ಇದೀಗ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿದೆ.
ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಸರ್ಕಾರ ಬದ್ಧವಾಗಿದ್ದು, ಯುವಕರಿಗೆ ಹೆಚ್ಚಿನ ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತಿದೆ ಎಂದು ಹೇಳಿದರು.
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಆನೆ, ಚಿರತೆ ಮತ್ತು ಹುಲಿಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳ ನಿಗ್ರಹಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಕುರಿತಾಗಿ ಸಮಗ್ರ ಕಾರ್ಯಾಚರಣೆ ಮುಂದುವರಿದಿದೆ ಎಂದರು. ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52,000 ಕೋಟಿ ರೂ. ವೆಚ್ಚವಾಗುತ್ತಿದ್ದರೂ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಮುಂದುವರಿಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಗುಂಬೆ ಸುರಂಗ ಮಾರ್ಗ ನಿರ್ಮಾಣ ಕುರಿತು ಪರಿಸರವಾದಿಗಳೊಂದಿಗೆ ಚರ್ಚಿಸಿ ಅಗತ್ಯ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಕಳದಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಶಾಸಕರು ಸಚಿವರಾಗಬಯಸುವುದು ತಪ್ಪಲ್ಲ. ಆದರೆ ಮೊದಲ ಬಾರಿಗೆ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions