ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಭೂ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಸೂಚಿಸಿ ತಾತ್ಕಾಲಿಕ ಆದೇಶವನ್ನು ಶಿವಮೊಗ್ಗದ ಜಿಲ್ಲಾಧಿಕಾರಿಯವರು ಹೊರಡಿಸಿದ್ದಾರೆ.
ತೀರ್ಥಹಳ್ಳಿ -ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ (ಹುಲಿಕಲ್ ಘಾಟ್)ನ 42.10ರಿಂದ 42.20ರಲ್ಲಿನ ಹೇರ್‌ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮತ್ತೆ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟಿ ಮಾರ್ಗ ವ್ಯಾಪ್ತಿಯಲ್ಲಿ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲದವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಾತ್ಕಾಲಿಕವಾಗಿ ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions