Advertisement

ಕಾಪುವಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಪಲ್ಟಿ, ಮೀನುಗಾರರ ರಕ್ಷಣೆ

ಉಡುಪಿ ಜಿಲ್ಲೆಯ ಕಾಪು ಸಮೀಪ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ದೋಣಿಯಲ್ಲಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ರಕ್ಷಣೆ ಮಾಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಮತ್ತೊಂದು ದುರಂತ ತಪ್ಪಿದಂತಾಗಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions