ತೀರ್ಥಹಳ್ಳಿ: ದ್ವಿತೀಯ ಪಿಯುಸಿ (PUC) ಪರೀಕ್ಷೆಯ ಫಲಿತಾಂಶದಲ್ಲಿ ತಾಲೂಕಿನ ವಿದ್ಯಾರ್ಥಿನಿ ಐಫಾ ಅವರು ಉತ್ತಮ ಸಾಧನೆ ಮಾಡಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರು 600ರಲ್ಲಿ 558 ಅಂಕಗಳನ್ನು (93%) ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಐಫಾ ಅವರು ತೀರ್ಥಹಳ್ಳಿಯ ಹಸನಬ್ಬ ಮತ್ತು ಹಾಜಿರಾ ದಂಪತಿಯ ಪುತ್ರಿಯಾಗಿದ್ದಾರೆ. ಪರಿಶ್ರಮ ಹಾಗೂ ನಿರಂತರ ಅಭ್ಯಾಸದ ಫಲವಾಗಿ ಈ ಸಾಧನೆ ಸಾಧ್ಯವಾಗಿದ್ದು, ಕುಟುಂಬದವರು ಹಾಗೂ ಶಿಕ್ಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.
ಇವರ ಸಾಧನೆಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇನ್ನಷ್ಟು ಸಾಧನೆ ಮಾಡಲೆಂದು ಹಾರೈಸಿದ್ದಾರೆ.
- ವರದಿ ಶಾರೂಕ್ ತೀರ್ಥಹಳ್ಳಿ
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions