Advertisement

ನಾಳೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ

2024ರ ಲೋಕಸಭೆ ಚುನಾವಣೆಯಲ್ಲಿ (Loksabha Election ) ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ (Rahul Gandhi) ಆಟಂ ಬಾಂಬ್ ಸಿಡಿಸಿದ್ದಾರೆ. ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಾಳೆ (ಆಗಸ್ಟ್ 08) ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್‌ ಬೃಹತ್‌ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನಾ ಸಮಾವೇಶಕ್ಕೆ 'ವೋಟ್ ಅಧಿಕಾರ್ ರ್ಯಾಲಿ' ಎಂದು ಹೆಸರಿಸಲಾಗಿದ್ದು, ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಹೀಗಾಗಿ ಟ್ರಾಫಿಕ್ ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಿಸಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಇನ್ನು ಭದ್ರತೆಗಾಗಿ 6 ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions