Advertisement

ಅ.11ರಂದು ಉಡುಪಿಯಲ್ಲಿ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಸಮಾರಂಭ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಸಮಾರಂಭ ಅ.11ರಂದು ಸಂಜೆ 4.30ಕ್ಕೆ ಉಡುಪಿಯ ಕುಂಜಿಬೆಟ್ಟು ಶಾರದಾ ಮಂಟಪ ರಸ್ತೆಯಲ್ಲಿರುವ ಯಕ್ಷಗಾನ ಕಲಾರಂಗ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಬಾರಿ ಖ್ಯಾತ ಸಂಘಟಕ, ರಂಗಕರ್ಮಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್.ಪಿ. ಅವರನ್ನು ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಸಂಜೆ 4.30ರಿಂದ 5 ಗಂಟೆಯವರೆಗೆ ಬಾರಕೂರಿನ ಖ್ಯಾತ ಗಾಯಕ ಹಾಗೂ ಪಿ. ಕಾಳಿಂಗರಾವ್ ಅವರ ಮೊಮ್ಮಗ ರಾಜೇಶ್ ಶಾನ್‌ಭೋಗ್ ಅವರಿಂದ ಸುಮಧುರ ಸಂಗೀತ ಕಾರ್ಯಕ್ರಮ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ.-ಉಡುಪಿ ಜಿಲ್ಲೆ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ವಹಿಸಲಿದ್ದಾರೆ.

ಉಡುಪಿ ಅಪರ ಜಿಲ್ಲಾಧಿಕಾರಿ ಅಭೀದ್ ಗದ್ಯಾಳ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ (ರಿ.) ಕರ್ನಾಟಕದ ಸಂಸ್ಥಾಪಕ ಸುರೇಶ್ ಗೋಕಾಕ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಸಚಿವ ಹಾಗೂ ಖ್ಯಾತ ಉದ್ಯಮಿ ಪ್ರಮೋದ್ ಮಧ್ವರಾಜ್ ಅವರು ರಾಯಣ್ಣ ಮೂರ್ತಿಗೆ ಕ್ಷೀರಾಭಿಷೇಕ ನೆರವೇರಿಸಲಿದ್ದು, ಉಡುಪಿಯ ಗಾಂಧಿ ಆಸ್ಪತ್ರೆಯ ಸಂಸ್ಥಾಪಕ ಡಾ. ಹರಿಶ್ಚಂದ್ರ ಅವರು ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಭಾಗವಹಿಸಲಿದ್ದಾರೆ.

ಸಾಹಿತಿ ಹಾಗೂ ಉರಗ ತಜ್ಞ ಗುರುರಾಜ್ ಸನಿಲ್ ಅವರು ಅಭಿನಂದನಾ ಮಾತುಗಳನ್ನಾಡಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಲಕ್ಷ್ಮಣ್ ಕೋಲ್ಕಾರ್, ಕುಮಾರ್ ಪ್ರಸಾದ್, ಬಸವರಾಜ್ ಐಹೊಳೆ ಹಾಗೂ ಕಾಳಪ್ಪ ಹರಗಿ ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions