Advertisement

ವಿಜ್ಞಾನ ವಿಭಾಗ : ಕಾರ್ಕಳದ ಸಮೀಕ್ಷಾಳಿಗೆ 600ಕ್ಕೆ 597 ಅಂಕ

ತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಮೀಕ್ಷಾ ಆರ್ ಅವರು 600ರಲ್ಲಿ 597 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ರ‍್ಯಾಂಕ್ ಗಳಿಸಿದ್ದಾರೆ. ಅವರ ಈ ಸಾಧನೆ ಕಾರ್ಕಳ ತಾಲೂಕಿನ ಹೆಬ್ರಿಯ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿಗೆ ಕೀರ್ತಿ ತಂದಿದೆ.

ಅಜೆಕಾರು ಸಮೀಪದ ಮರ್ಣೆ ಗ್ರಾಮದ ನಿವಾಸಿಗಳಾದ ರವೀಚಂದ್ರ ನಾಯಕ್ ಹಾಗೂ ಸರಳ ದಂಪತಿಯ ಪುತ್ರಿಯಾದ ಸಮೀಕ್ಷಾ ಅವರು ಪಿಸಿಎಂಸಿಎಸ್ ವಿಷಯಗಳಲ್ಲಿ ಶೇ. 100 ಅಂಕಗಳನ್ನು ಪಡೆದಿದ್ದಾರೆ. ಸರಳ ಕುಟುಂಬ ಹಿನ್ನೆಲೆಯಿಂದ ಬಂದಿದ್ದರೂ ತಮ್ಮ ಪರಿಶ್ರಮ ಮತ್ತು ದೃಢನಿಶ್ಚಯದಿಂದ ಈ ಯಶಸ್ಸು ಸಾಧಿಸಿದ್ದಾರೆ. ತಂದೆ ಉಡುಪಿಯ ಹೋಟೆಲ್‌ನಲ್ಲಿ ಉದ್ಯೋಗಿಯಾಗಿದ್ದು, ತಾಯಿ ಗೃಹಿಣಿಯಾಗಿ ಮನೆ ಕೆಲಸ ನಿರ್ವಹಿಸುತ್ತಿದ್ದಾರೆ. ಕುಟುಂಬದ ಬೆಂಬಲ ಮತ್ತು ತನ್ನ ಶಿಸ್ತಿನ ಓದು ಸಮೀಕ್ಷಾಳಿಗೆ ಈ ಮಟ್ಟದ ಸಾಧನೆಗೆ ದಾರಿ ಮಾಡಿಕೊಟ್ಟಿದೆ.

ತಮ್ಮ ಸಾಧನೆ ಕುರಿತು ಮಾತನಾಡಿದ ಸಮೀಕ್ಷಾ, “ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲದಿಂದಲೇ ಈ ಫಲಿತಾಂಶ ಸಾಧ್ಯವಾಗಿದೆ” ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಬೇಕೆಂಬ ಆಶಯ ಹೊಂದಿರುವ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸನ್ನು ಹಂಚಿಕೊಂಡಿದ್ದಾರೆ.

ಇಂಗ್ಲಿಷ್ ವಿಷಯದಲ್ಲಿ 97 ಅಂಕಗಳನ್ನು ಗಳಿಸಿರುವುದು ಸಮೀಕ್ಷಾ ಅವರ ಸಮಗ್ರ ಪ್ರತಿಭೆಯನ್ನು ಪ್ರತಿಬಿಂಬಿಸುತ್ತದೆ. ಸಮೀಕ್ಷಾ ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸ್ಥಳೀಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions