Advertisement

ಮಲ್ಲಾರಿನ ಗುಜರಿ ಅಂಗಡಿ ಅಗ್ನಿ ದುರಂತ ಪರಿಹಾರ ಮಂಜೂರು, ಮಾನ್ಯ ಮುಖ್ಯಮಂತ್ರಿಗಳಿಗೆ,ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಶ್ರೀ ವಿನಯ್ ಕುಮಾರ್ ಸೊರಕೆಯವರಿಗೆ ಶರ್ಫುದ್ದಿನ್ ಶೇಖ್ ಧನ್ಯವಾದ

ಕಾಪುವಿನ ಮಲ್ಲಾರು ಫಕೀರನಕಟ್ಟೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಜೂರು ಮಾಡಿದ್ದಕ್ಕೆ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾಂಗ್ರೆಸ್ ಅಧ್ಯಕ್ಷ ಶರ್ಫುದ್ದಿನ್ ಶೇಖ್ ಮುಖ್ಯಮಂತ್ರಿಗಳಿಗೆ, ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು, ಪರಿಹಾರ ಮೊತ್ತ ಮಂಜೂರು ಮಾಡುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷವಾಗಿ ಮಾಜಿ ಸಚಿವರಾದ ವಿನಯಕುಮಾರ ಸೊರಕೆಯವರ ಶ್ರಮವನ್ನು ಸ್ಮರಿಸುತ್ತಾ, ಸೊರಕೆಯವರು ಸಂತ್ರಸ್ತ ಕುಟುಂಬಕ್ಕೆ ಪರಿಹಾರವನ್ನು ಮಂಜೂರು ಮಾಡುವಲ್ಲಿ ನಿರಂತರ ಕೆಲಸ ಮಾಡಿರುವುದು ಮಾತ್ರವಲ್ಲ ಕ್ಷೇತ್ರದಲ್ಲಿ ಯಾರೇ ತೊಂದರೆಗೀಡಾದರೂ ಅವರ ಕುಂದುಕೊರತೆಗಳಿಗೆ ಸ್ಪಂದಿಸುವ ಮಾನವೀಯ ಕಳಕಳಿಯು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions