Advertisement

ಕರ್ನಾಟಕ ಸರ್ವಾಭೌಮ ಪ್ರಶಸ್ತಿ ಸ್ವೀಕರಿಸಿದ ಉಡುಪಿಯ ಸೌಕೂರು ದಸ್ತಾಗಿರ್

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರದಾನ ಮಾಡುವ ಪ್ರತಿಷ್ಠಿತ *ಕರ್ನಾಟಕ ಸರ್ವಾಭೌಮ ಪ್ರಶಸ್ತಿ* ಯನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಸೌಕೂರು ದಸ್ತಾಗಿರ್ ಅವರು ಇಂದು ಬೆಂಗಳೂರಿನ ಪ್ರೆಸ್ಟೀಜ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿದರು.

ಸಮಾಜ ಸೇವೆ ಹಾಗೂ ಸಂಘಟನೆ ಚಟುವಟಿಕೆಗಳಲ್ಲಿ ತೋರಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಅವರಿಗೆ ಪ್ರದಾನಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಗಣ್ಯರು, ಸಂಘಟನಾ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಸೌಕೂರು ದಸ್ತಾಗಿರ್ ಅವರು, ಈ ಗೌರವವನ್ನು ತಮ್ಮ ಸಂಘಟನೆಯ ಎಲ್ಲಾ ಸದಸ್ಯರಿಗೆ ಸಮರ್ಪಿಸುವುದಾಗಿ ತಿಳಿಸಿ, ಮುಂದಿನ ದಿನಗಳಲ್ಲಿ ಸಮಾಜ ಸೇವೆಯನ್ನು ಇನ್ನಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಟಿ ಎ ನಾರಾಯಣ ಗೌಡ ಸೇರಿದಂತೆ ಪದಾಧಿಕಾರಿಗಳು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions