Advertisement

ವಕ್ಫ್ ತಿದ್ದು ಪಡಿ ಕಾಯ್ದೆಗೆ ಸುಪ್ರೀಂ ಮಧ್ಯಂತರ ತಡೆಯಾಜ್ಞೆ, ದೇಶದ ಸಂವಿಧಾನಕ್ಕೆ ಸಂದ ಜಯ : ಶರ್ಫುದ್ದೀನ್ ಶೇಖ್

ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದು ಪಡಿ ಕಾಯ್ದೆಯ ವಿರುದ್ದ ಕಳೆದ ಒಂದು ವರ್ಷದಿಂದ ದೇಶದಾದ್ಯಂತ ಎಲ್ಲಾ ಮುಸಲ್ಮಾನರು ಮತ್ತು ಪ್ರಗತಿಪರ ಚಿಂತಕರು ವಿಶೇಷವಾಗಿ ದೇಶದ ವಿರೋಧ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ಸಂಸದರು ಸೇರಿದಂತೆ ಎಲ್ಲರೂ ದಿಟ್ಟ ಹೋರಾಟ ಮಾಡಿದ್ದರಿಂದ ಇವತ್ತು ಸುಪ್ರೀಂಕೋರ್ಟ್ ಕರಾಳ ಕಾಯ್ದೆಯಲ್ಲಿರುವ ಪ್ರಮುಖ ಅಂಶಗಳಿಗೆ ಮದ್ಯಂತರ ತಡೆಯಾಜ್ಞೆ ನೀಡಿದೆ ಇದು ದೇಶದ ಸಂವಿಧಾನಕ್ಕೆ ಸಂದ ಜಯವಾಗಿದೆ.

ಇದರಿಂದ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರಿಗೆ ಅನುಸರಿಸುತ್ತಿರುವ ದ್ವಿಮುಖ ನೀತಿಗೆ ಕೇಂದ್ರ ಸರಕಾರದ ಕುತಂತ್ರ ರಾಜಕೀಯಕ್ಕೆ ಹಿನ್ನಡೆಯಾಗಿದೆ. ಸ್ಥಳೀಯವಾಗಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷ ಕಾಯ್ದೆಯ ವಿರುದ್ದ ಪ್ರತಿಭಟನೆಗಳನ್ನು ನಡೆಸಿದೆ, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಿಲುವು ಬದ್ದವಾಗಿದೆ.

ಕೇಂದ್ರ ಸರಕಾರ ವೋಟಿಗೊಸ್ಕರ ಇಂತಹ ಕಾನೂನುಗಳನ್ನು ಜಾರಿಗೆ ತಂದು ಅಲ್ಪಸಂಖ್ಯಾತರನ್ನು ಇಕ್ಕಟ್ಟಿಗೆ ಸಿಲುಕಿಸಿ ದೇಶದ ಜನರ ದಾರಿ ತಪ್ಪಿಸುವಂತಹ ಕೆಲಸ ಮಾಡುವುದನ್ನು ಇನ್ನಾದರೂ ನಿಲ್ಲಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಆಗ್ರಹಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions