Advertisement

ಮೇಕೆದಾಟು ಡ್ಯಾಮ್‌ನಿಂದ ತಮಿಳುನಾಡು ರೈತರಿಗೂ ಅನುಕೂಲ: ರಾಮಲಿಂಗಾ ರೆಡ್ಡಿ

ಮೇಕೆದಾಟು ಯೋಜನೆಯು ಹೊಸ ಡ್ಯಾಮ್ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕೇವಲ ನೀರು ಸಂಗ್ರಹಣೆಗೆ ಮಾತ್ರ ಸೀಮಿತವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆಯಿಂದ ಬೆಂಗಳೂರಿಗೆ 4.75 ಟಿಎಂಸಿ ಕುಡಿಯುವ ನೀರು ದೊರೆಯಲಿದ್ದು, 400 ಮೆಗಾವಾಟ್ ವಿದ್ಯುತ್ ಉತ್ಪಾದನೆಯೂ ಸಾಧ್ಯವಾಗಲಿದೆ. ಇದರಿಂದ ವ್ಯವಸಾಯಕ್ಕೆ ನೀರು ಸಿಗುವುದಿಲ್ಲ. ನಾಲ್ಕೈದು ವರ್ಷಗಳಿಗೊಮ್ಮೆ ಮಳೆ ಕೊರತೆ ಉಂಟಾಗುತ್ತದೆ. ತಮಿಳುನಾಡಿಗೆ ಕೇಂದ್ರದ ನಿಯಮಗಳ ಪ್ರಕಾರ ತಿಂಗಳಿಗೆ ಒಮ್ಮೆ ನೀರು ಬಿಡುಗಡೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಜೂನ್ ತಿಂಗಳಲ್ಲಿ 19 ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂಬ ತೀರ್ಮಾನ ಈಗಾಗಲೇ ಆಗಿದೆ. ನಮ್ಮ ಬಳಿ 16 ಟಿಎಂಸಿ ನೀರು ಇದ್ದು, ಕುಡಿಯುವ ನೀರಿನ ಅಗತ್ಯವನ್ನು ಹೊರತುಪಡಿಸಿದರೆ ಕೇವಲ 3 ಟಿಎಂಸಿ ನೀರು ಮಾತ್ರ ಲಭ್ಯವಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮರುಪರಿಶೀಲನಾ ಅರ್ಜಿಯನ್ನೂ ತಿರಸ್ಕರಿಸಿದ್ದು, ಎರಡು ಬಾರಿ ತಮಿಳುನಾಡಿನ ಅರ್ಜಿಗಳು ತಿರಸ್ಕೃತವಾಗಿವೆ ಎಂದು ಹೇಳಿದರು.

ಆದರೂ ಅಲ್ಲಿನ ಮುಖ್ಯಮಂತ್ರಿ ಹೋರಾಟ ನಡೆಸಬೇಕೆಂದು ಹೇಳುತ್ತಿದ್ದಾರೆ. ನಮಗೆ ಹಂಚಿಕೆಯಾಗಿರುವ ನೀರು ನಮಗೆ ಸಾಕಾಗಿದೆ. ಮೇಕೆದಾಟುವಿನಲ್ಲಿ ಡ್ಯಾಮ್ ನಿರ್ಮಾಣವಾಗಿದ್ದರೆ ಈಗ ಅವರಿಗೆ ನೀರು ಬಿಡುಗಡೆ ಮಾಡಲು ಸಾಧ್ಯವಾಗುತ್ತಿತ್ತು. ಇದರಿಂದ ತಮಿಳುನಾಡಿನ ರೈತರೂ ಪ್ರಯೋಜನ ಪಡೆಯುತ್ತಿದ್ದರು. ಅವರು ವಿರೋಧಿಸಿದರೆ ಅವರ ರೈತರಿಗೆ ತೊಂದರೆಯಾಗಲಿದೆ ಎಂದು ಹೇಳಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions