ಉಡುಪಿ ಏಪ್ರಿಲ್ 10 (ಕ.ವಾ): ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ
ಸಹಭಾಗಿತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ
ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತವು ಹಮ್ಮಿಕೊಂಡಿದೆ.
ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲ ಸಕ್ರಿಯ ಪಾಲುದಾರರ ಜೊತೆಯಲ್ಲಿ
ವಿಶೇಷ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ, ಉಡುಪಿಯ ಸಂಸ್ಕೃತಿ, ಪರಂಪರೆ, ಆಹಾರ ಶೈಲಿ ಮತ್ತು
ಧಾರ್ಮಿಕತೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಚಾರ ನೀಡಲು ಉದ್ದೇಶಿಸಲಾಗಿದ್ದು ಇದಕ್ಕೆ
ಡಿಜಿಟಲ್ ಸ್ಪರ್ಶ ನೀಡಲಾಗುವುದು ಎಂದರು.
ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಸಂಸ್ಥೆಯು ರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಕಂಟೆAಟ್‌ಗಳನ್ನು ತಯಾರಿಸುತ್ತಿದೆ.
ಇದರಲ್ಲಿ ವಿದ್ಯಾರ್ಥಿಗಳು, ಕಂಟೆAಟ್ ಕ್ರಿಯೇಟರ್ಸ್ ಭಾಗವಹಿಸಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಮಾಹಿತಿ ನೀಡುವ
ಫೋಟೋ ಮತ್ತು ವೀಡಿಯೋಗಳನ್ನು ಹಂಚಿಕೊಳ್ಳುವ ಅವಕಾಶ ಇದೆ. ವಿಶೇಷವಾಗಿ ಕಾಲೇಜು ಮಟ್ಟದಲ್ಲಿ ಲ್ಯಾಬ್‌ಗಳನ್ನು
ಅಳವಡಿಸಿ ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದರು.
ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯ ಬಗ್ಗೆ ಅತ್ಯಪೂರ್ವ ಕಥಾವಸ್ತು, ಸಾಂಸ್ಕೃತಿಕ ಸಾಕ್ಷ್ಯಚಿತ್ರ, ಫೋಟೋ ಗಳು ಅಥವಾ
ವೀಡಿಯೋಗಳನ್ನು ತಯಾರಿಸಿ ಹಂಚಿಕೊಳ್ಳಬಹುದು. ಅತ್ಯುತ್ತಮ ಗುಣಮಟ್ಟದ ಕಂಟೆAಟ್‌ಗಳಿಗೆ ಬೆಸ್ಟ್ ವಿಡಿಯೋ, ಫೋಟೋ
ಮೆಮೊಯಿರ್ ಮತ್ತು ಬೆಸ್ಟ್ ಸ್ಟೋರಿ ವಿಭಾಗದಲ್ಲಿ ಪ್ರತಿ ತಿಂಗಳೂ ಪ್ರಶಸ್ತಿ ನೀಡುವ ಜೊತೆ ಸ್ಟೋರಿ ಆಫ್ ದ ಇಯರ್,
ಎಮರ್ಜಿಂಗ್ ಸ್ಟೋರಿ ಟೆಲ್ಲರ್ ಹಾಗೂ ಕಲ್ಚರಲ್ ಡಾಕ್ಯುಮೆಂಟೇಶನ್ ವಿಭಾಗದಲ್ಲಿ ವಾರ್ಷಿಕ ಪ್ರಶಸ್ತಿಯನ್ನೂ ನೀಡಲಾಗುವುದು.
ಮೊದಲಿಗೆ ಒಂದು ಕಾಲೇಜಿನಲ್ಲಿ ಕ್ರಿಯೇಟರ್ಸ್ ಲ್ಯಾಬ್ ಅನ್ನು ಸ್ಥಾಪಿಸಲಾಗುವುದು ಮುಂದಿನ ದಿನಗಳಲ್ಲಿ ಇತರ ಕಾಲೇಜುಗಳಿಗೆ
ವಿಸ್ತರಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇಲ್ಲಿನ ಬೀಚ್‌ಗಳಲ್ಲಿ ಜಲಕ್ರೀಡೆ, ಆಯುರ್ವೇದ
ಪ್ರವಾಸೋದ್ಯಮ, ಸ್ಥಳೀಯ ಆಹಾರ ಪದ್ಧತಿ, ಪ್ರಾಕೃತಿಕ ಸ್ಥಳಗಳು, ಧಾರ್ಮಿಕ ಸ್ಥಳಗಳ ಬಗ್ಗೆ ವಿದೇಶಿಗರಿಗೆ ಹೆಚ್ಚು ಪ್ರಚಾರ
ನೀಡುವ ಅಗತ್ಯವಿದೆ. ಆಯುರ್ವೇದ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ತರಬೇತಿಗಳನ್ನು ಆಯೋಜಿಸಲಾಗುವುದು ಎಂದ ಅವರು
ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಲು ನುರಿತ ಗೈಡ್ ಗಳನ್ನೂ ನಿಯೋಜಿಸುವ ಕುರಿತು ಯೋಜಿಸಲಾಗುತ್ತಿದೆ
ಎಂದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ವಿಂಧ್ಯಾ, ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ತನ್ಮಯ
ಗೋಸ್ವಾಮಿ, ಮಾಹೆ ಎಂಐಸಿ ನಿರ್ದೇಶಕಿ ಶುಭಾ ಎಚ್ ಎಸ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions