ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಕೆಳಪೇಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಸುರೇಂದ್ರ ನಾಯ್ಕ (36) ಎಂಬ ವ್ಯಕ್ತಿಯು ಜೂನ್ 28 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions