ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು.
ಅಂದಿನ ಸಮಾರಂಭದಲ್ಲಿ ನಾನು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ನನ್ನ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್‌ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions