ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ಹೊಸದಿಲ್ಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು. ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದರು.
ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ಹೊಸದಿಲ್ಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನರ್ ರಚನೆ ವಿಳಂಬಕ್ಕೆ ಕಾರಣವಿರಬಹುದುಎಂದರು.
ಮಲೆನಾಡಿನಲ್ಲಿ ರೆಸಾರ್ಟ್ ಗಳಿಗೆ ಬೇಕಾಬಿಟ್ಟಿಯಾಗಿ ಅನುಮತಿ ನೀಡುತ್ತಿರುವ ಸರಕಾರ, ಅರಣ್ಯವಾಸಿಗಳಿಗೆ ಹಕ್ಕು ಪತ್ರ ನೀಡುತ್ತಿಲ್ಲ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅರಣ್ಯ ಇಲಾಖೆಯಿಂದ ಹಕ್ಕು ಪತ್ರ ನೀಡುವುದೂ ಸೇರಿದಂತೆ ಹಲವು ವಿಷಯದ ಬಗ್ಗೆ ಸದ್ಯ ದಲ್ಲಿಯೇ ಸಭೆ ನಡೆಸಲಾಗುವುದು ಎಂದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions