ವಿಕಲಚೇತನರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಲಾದ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ
ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿಚಾಲಿತ ಗಾಲಿಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಅಥವಾ ಖುದ್ದಾಗಿ ಮೇಲ್ಕಂಡ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕೆಲಸದ ಸ್ಥಳದಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ
ಉಡುಪಿ, ಆಗಸ್ಟ್ 25 (ಕವಾ): ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಕಾಯ್ದೆ 2013 ರ ಅನುಷ್ಠಾನಕ್ಕಾಗಿ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನಗಳನ್ವಯ ಕಾಯ್ದೆಯು ಅನ್ವಯಿಸುವ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಪ್ರತಿ ಸಂಸ್ಥೆಯ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸುವುದು ಕಡ್ಡಾಯವಾಗಿರುತ್ತದೆ.ಜಿಲ್ಲೆಯಲ್ಲಿ ಹಲವು ಸಂಸ್ಥೆಗಳು ಇದುವರೆಗೂ ಆಂತರಿಕ ಸಮಿತಿಯನ್ನು ರಚಿಸದೇ ಮತ್ತು ರಚಿಸಿರುವ ಬಗ್ಗೆ ಮಾಹಿತಿ ನೀಡದಿರುವುದು ಕಂಡು ಬಂದಿದ್ದು, ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ, ಆಂತರಿಕ ಸಮಿತಿಯನ್ನು ರಚಿಸದ ಎಲ್ಲಾ ಸಂಸ್ಥೆಗಳು ಈ ಕೂಡಲೇ ಅಂತರಿಕ ದೂರು ಸಮಿತಿಯನ್ನು ರಚನೆ ಮಾಡಿ, ಸಮಿತಿ ರಚಿಸಿದ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಕೂಡಲೇ ಸಲ್ಲಿಸಿ, ಅದರ ಪ್ರತಿಯನ್ನು ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪ ವಿಭಾಗ, ರಜತಾದ್ರಿ, 1 ನೇ ಮಹಡಿ, ನಂ ಎ-201, ಮಣಿಪಾಲ್, ಉಡುಪಿ ಜಿಲ್ಲೆ ಇಲ್ಲಿಗೂ ಸಹ ಸಲ್ಲಿಸುವಂತೆ ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಶಿರಿಯಾರ ಗ್ರಾ.ಪಂ: ಸೆ.1 ರಂದು ಗ್ರಾಮಸಭೆ
ಉಡುಪಿ, ಆಗಸ್ಟ್ 25 (ಕವಾ): 9 ನೇ ಶಿರಿಯಾರ ಗ್ರಾಮ ಪಂಚಾಯತ್‌ನ ಪ್ರಸಕ್ತ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಸೆಪ್ಟಂಬರ್ 1 ರಂದು ಬೆಳಗ್ಗೆ 10.30 ಕ್ಕೆ ಶಿರಿಯಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಫಲಾನುಭವಿ ಆಧಾರಿತ ಯೋಜನೆ : ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 25 (ಕವಾ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ 13 ಫಲಾನುಭವಿ ಆಧಾರಿತ ಯೋಜನೆಗಳಾದ ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ
ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆöÊಲ್‌ಕಿಟ್ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವೀಲ್‌ಚೇರ್‌ಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಆನ್‌ಲೈನ್ ಸೇವಾಸಿಂಧು ತಂತ್ರಾAಶದ ಮೂಲಕ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ನೇರವಾಗಿ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820- 2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಶಿಷ್ಯವೇತನ : ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ
ಉಡುಪಿ, ಆಗಸ್ಟ್ 25 (ಕವಾ): ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖರು) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರಾತಿಗಾಗಿ ಅರ್ಹ ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗ ವಿಸ್ತರಿಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿ : ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 25 (ಕವಾ): ಜಿಲ್ಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ, ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲನಿವಾಸಿ ಮಾಜಿ ಸೈನಿಕರ ಮಕ್ಕಳಿಂದ "ಜನರಲ್ ಕೆ.ಎಸ್ ತಿಮ್ಮಯ್ಯ" ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ
ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 25 (ಕವಾ):ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ / ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೋಮಾ ವರೆಗೆ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಕ್ಟೋಬರ್ 15 ರ ಒಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ನವೆಂಬರ್ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ವ್ಯಕ್ತಿ ನಾಪತ್ತೆ
ಉಡುಪಿ, ಆಗಸ್ಟ್ 25 (ಕವಾ): ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಧನ್‌ರಾಜ್ (43) ಎಂಬ ವ್ಯಕ್ತಿಯು ಆಗಸ್ಟ್ 22 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
ಉಡುಪಿ ನಗರಸಭೆ : ಸಾಮಾನ್ಯ ಸಭೆ
ಉಡುಪಿ, ಆಗಸ್ಟ್ 25 (ಕವಾ): ಉಡುಪಿ ನಗರಸಭೆಯ ಸಾಮಾನ್ಯ ಸಭೆಯು ಆಗಸ್ಟ್ 29 ರಂದು ಬೆಳಗ್ಗೆ 10.30 ಕ್ಕೆ ನಗರಸಭಾ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions