ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಶ್ರೀ ನಾಗೇಂದ್ರ ಪುತ್ರನ್ ಅವರಿಗೆ ‘ಕರ್ನಾಟಕ ಸೇವಾ ಶ್ರೇಷ್ಠ ರತ್ನ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ನೆಲಮಂಗಲದ ಪುಷ್ಪ ಬೈರೇಗೌಡ ಕನ್ವೆನ್‌ಷನ್ ಹಾಲ್‌ನಲ್ಲಿ ಶನಿವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ನಾಗೇಂದ್ರ ಪುತ್ರನ್ ಅವರಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಸಾಮಾಜಿಕ ಕ್ಷೇತ್ರದಲ್ಲಿ ಜನಪರ ಕಾಳಜಿಯೊಂದಿಗೆ ವಿವಿಧ ಹೋರಾಟಗಳು ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು, ಅಲ್ಲದೆ ರಾಜಕೀಯ ರಂಗದಲ್ಲಿಯೂ ಸಕ್ರಿಯವಾಗಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹೇಳಿದರು.
ಸಮಾಜಮುಖಿ ಕಾರ್ಯಗಳ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ನಾಗೇಂದ್ರ ಪುತ್ರನ್ ಅವರಿಗೆ ರಾಜ್ಯ ಮಟ್ಟದ ಗೌರವ ದೊರೆತಿರುವುದು ಅವರ ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ಸಂತಸ ಮೂಡಿಸಿದೆ.


ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಯಿಂದ ಪತ್ರಕರ್ತರು ಹಾಗೂ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions