ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಸಮುದಾಯದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಇಲಾಖಾ ವೆಬ್‌ಸೈಟ್‌ನ ಸೇವಾಸಿಂಧು ಫೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ (ದೂ.ಸಂಖ್ಯೆ: 0820-2574892) ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions