Advertisement

ಮನರೇಗಾ ಹಿಂತೆಗೆತ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂತೆಗೆದ ಜನವಿರೋಧಿ ನೀತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಬಡವರ ಪರವಾದ ಯೋಜನೆಗಳನ್ನು ಬದಲಾವಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ಬಡವರ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಮನರೇಗಾ ಯೋಜನೆಯನ್ನು ಉಳಿಸಲು ರೈತರ ಚಳವಳಿ ಮಾದರಿಯಲ್ಲಿ ಹೋರಾಟ ಅಗತ್ಯ ಎಂದು ಹೇಳಿದರು.

ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಮನವಿಯನ್ನು ಸ್ವೀಕರಿಸಿದರು.

ಸಭೆಯಲ್ಲಿ ಅಶೋಕ್ ಕುಮಾರ್ ಕೊಡವೂರು, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಸೇರಿದಂತೆ ಹಲವರು ಮಾತನಾಡಿದರು.

ಈ ವೇಳೆ ಮುಖಂಡರಾದ ಎಂ.ಎ. ಗಪೂರ್, ಕಿಶನ್ ಹೆಗ್ಡೆ ಕೇಳ್ಕೆಬೈಲ್, ಜ್ಯೋತಿ ಹೆಬ್ಬಾರ್, ವೆರೋನಿಕಾ ಕರ್ನೆಲಿಯೋ, ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ದಿನೇಶ್ ಹೆಗ್ಡೆ ಮಳವಳ್ಳಿ, ನಿರೇ ಕೃಷ್ಣ ಶೆಟ್ಟಿ, ರಾಘವೇಂದ್ರ ಶೆಟ್ಟಿ, ವೈ. ಸುಕುಮಾರ್, ಸಂತೋಷ್ ಕುಲಾಲ್, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರ್, ಶಬ್ಬಿರ್ ಅಹ್ಮದ್, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವರಾ, ಹರಿಪ್ರಸಾದ್ ರೈ, ಫಾ| ಮಿಲಿಯಂ ಮಾರ್ಟೀಸ್, ಜಯಕುಮಾರ್, ಕಿಶೋರ್ ಕುಮಾರ್ ಎರ್ಮಾಳ್, ಮಹಾಬಲ ಕುಂದರ್, ಅಶೋಕ್ ಹೆಗ್ಡೆ, ಸುಮನ್ ಬೇಳಾರ್, ರವೀಂದ್ರ ಆಚಾರ್ಯ, ರಾಮದಾಸ್ ನಾಯಕ್, ಶರ್ಪುದ್ದೀನ್ ಶೇಖ್, ಉದ್ಯಾವರ ನಾಗೇಶ್ ಕುಮಾರ್, ಸುರೇಶ್ ಶೆಟ್ಟಿ ಬನ್ನಂಜೆ, ಸತೀಶ್ ಕೊಡವೂರು, ರೋಶನ್ ಶೆಟ್ಟಿ, ಇಸ್ಮಾಯಿಲ್ ಅತ್ರಾಡಿ, ಎಲ್ಲೂರು ಶಶಿಧರ ಶೆಟ್ಟಿ, ಕೇಶವ ಕೋಟ್ಯಾನ್, ಗಣೇಶ್ ನೆರ್ಗಿ, ಗಣೇಶ್ ರಾಜ್ ಸರಳಬೆಟ್ಟು ಸೇರಿದಂತೆ ಹಲವರು ಭಾಗವಹಿಸಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions