ಉಡುಪಿ ಜಿಲ್ಲೆಯ ಬ್ಯಾಂಕುಗಳು, ಫೈನಾನ್ಸ್‌ಗಳ ಹಾಗೂ ಸೊಸೈಟಿಗಳಲ್ಲಿ ನಕಲಿ ಚಿನ್ನ ಅಡವಿಡುವ ತಂಡಗಳಿಂದ ಚಿನ್ನಾಭರಣ ಪರಿವೀಕ್ಷಕರಿಗೆ ಸಮಸ್ಯೆಗಳಾಗುತ್ತಿದ್ದು, ಆ ಜಾಲವನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಮಂಗಳವಾರ ಉಡುಪಿ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ಹಾಗೂ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ, ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು, ಕಾರ್ಯದರ್ಶಿ ರಘುನಾಥ್ ಆಚಾರ್ಯ, ಜೊತೆ ಕಾರ್ಯದರ್ಶಿ ಪ್ರಸನ್ನ ಅಚಾರ್ಯ, ಕೋಶಾಧಿಕಾರಿ ದಿವಾಕರ್ ಆಚಾರ್ಯ, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷ ಕೀಶೊರ್ ಆಚಾರ್ಯ, ಜಯಪ್ರಕಾಶ್ ಕುತ್ಪಾಡಿ, ಹರೀಶ್ ಆಚಾರ್ಯ ಕಳತ್ತೂರು, ಅರುಣ್ ಆಚಾರ್ಯ, ಪ್ರಕಾಶ್ ಆಚಾರ್ಯ ಕಟಪಾಡಿ, ಸತೀಶ್ ಆಚಾರ್ಯ ಪಡುಬಿದ್ರಿ, ರಾಮ್‌ದಾಸ್ ಶೆಟ್ ಉಡುಪಿ, ಜಗದೀಶ್ ಆಚಾರ್ಯ, ಗಜೇಂದ್ರ ಶೇಟ್ ಉಡುಪಿ, ಗಣೀಶ್ ಆಚಾರ್ಯ, ಸುರೇಶ್ ಆಚಾರ್ಯ, ಪ್ರಭಾಕರ ಆಚಾರ್ಯ, ಪ್ರಸಾದ್ ಆಚಾರ್ಯ ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions