Advertisement

ಉಡುಪಿ ಜಿಲ್ಲೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ: ಪ್ರಕೃತಿ ವಿಕೋಪ ಕುರಿತು ಅಧಿಕಾರಿಗಳ ಸಭೆ, ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ

ಉಡುಪಿ: ರಾಜ್ಯ ಸರ್ಕಾರದ ಹೊಸ ಸಚಿವ ಸಂಪುಟ ರಚನೆಯಾದ ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಪ್ರಥಮ ಬಾರಿಗೆ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಭೇಟಿ ನೀಡಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಜಿಲ್ಲೆಯಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ಪರಿಸ್ಥಿತಿ, ಮುನ್ನೆಚ್ಚರಿಕಾ ಕ್ರಮಗಳು, ಪರಿಹಾರ ಕಾರ್ಯಗಳು ಹಾಗೂ ಇತರ ಅಭಿವೃದ್ಧಿ ವಿಚಾರಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಮಳೆ ಸಂಬಂಧಿತ ಯಾವುದೇ ಸಮಸ್ಯೆ ಎದುರಾದಲ್ಲಿ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಜನರ ನೆರವಿಗೆ ಧಾವಿಸಬೇಕು ಎಂದು ಸೂಚನೆ ನೀಡಿದರು.

ಸಚಿವರ ಆಗಮನದ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆತ್ಮೀಯ ಹಾಗೂ ಅದ್ದೂರಿ ಸ್ವಾಗತ ಕೋರಿದರು.

ಬಳಿಕ ಉಡುಪಿ ಸರ್ಕಾರಿ ಅತಿಥಿಗೃಹದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಪ್ರಮುಖ ಕಾರ್ಯಕರ್ತರೊಂದಿಗೆ ಸಚಿವರು ಸಮಾಲೋಚನೆ ನಡೆಸಿದರು. ಪಕ್ಷದ ಸಂಘಟನೆ ಬಲವರ್ಧನೆ, ಜಿಲ್ಲೆಯ ರಾಜಕೀಯ ಬೆಳವಣಿಗೆಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಶರ್ಫುದ್ದೀನ್ ಶೇಖ್, ಡಾ. ಶೇಖ್ ವಹೀದ್ ದಾವೂದ್, ಪ್ರಖ್ಯಾತ್ ಶೆಟ್ಟಿ, ಸಂತೋಷ್ ಕುಮಾರ್ ಬೈರಂಪಳ್ಳಿ, ವಿಶ್ವಾಸ್ ಅಮೀನ್, ಯಾಸೀನ್ ಹೆಮ್ಮಾಡಿ ಸೇರಿದಂತೆ ಹಲವಾರು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions