ಎಂಬತ್ತನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ‘ಹಸಿರು ಹೆಜ್ಜೆ’ ಪರಿಸರ ಸಂರಕ್ಷಣಾ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮವನ್ನು ಶರ್ಫುದ್ದೀನ್ ಶೇಖ್ ಕಾಪು ಇವರ ಉಸ್ತುವಾರಿಯಲ್ಲಿ ಆಯೋಜಿಸಲಾಯಿತು.
ಉಡುಪಿ ಜಿಲ್ಲಾ ಆಸ್ಪತ್ರೆ, ಕರ್ನಾಟಕ ಅರಣ್ಯ ಇಲಾಖೆ, ಅರ್ಥ್‌ನೆಸ್ಟ್ ಇಂಡಿಯಾ, ಹಾಗೂ ಎಕ್ ಸಾಥ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಉಡುಪಿ ಇದರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಜಿಲ್ಲಾ ಸರ್ಜನ್ ಡಾ. ಅಶೋಕ್ ,ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ಹಮೀದ್ ಯೂಸುಫ್ ಮೂಳೂರ್, ನಝೀರ್ ಅಹಮ್ಮದ್, ರೋಶನ್ ರೋಡ್ರಗೀಸ್, ಅನಿಲ್, ರಂಜಿತಾ, ಪೀಟರ್ ಪ್ರತಾಪ್, ನಾಝಿಯಾ ಮಲ್ಲಾರ್ ಮುಂತಾದ ಗಣ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಪ್ರಸ್ತುತ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಅಗತ್ಯತೆ ಅತ್ಯಂತ ಮಹತ್ವದ್ದಾಗಿದೆ. ಮುಂದಿನ ಪೀಳಿಗೆಗಾಗಿ ಭೂಮಿಯನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪರಿಸರದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವಂತಹ ಪರಿಸರಮುಖಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಅರ್ಥ್‌ಫೆಸ್ಟ್ ಇಂಡಿಯಾ ಪರವಾಗಿ ಮಾತನಾಡಿದ ಸರ್ಫುದ್ದೀನ್ ಶೇಕ್ ಅವರು, ಸ್ವಾತಂತ್ರ್ಯೋತ್ಸವದ ಅಂಗವಾಗಿ ಕರ್ನಾಟಕದಾದ್ಯಂತ 25 ಸ್ಥಳಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಅರ್ಥ್‌ಫೆಸ್ಟ್ ಇಂಡಿಯಾ ಹಾಗೂ ಎಕ್ ಸಾಥ್ ಸಂಸ್ಥೆಗಳು ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನಿರಂತರವಾಗಿ ಮುಂದುವರಿಸಲಿವೆ. ಅಲ್ಲದೇ ಇದೇ ಸೆಪ್ಟೆಂಬರ್ ತಿಂಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 10,000 ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಅರ್ಥ್‌ಫೆಸ್ಟ್ ಇಂಡಿಯಾ ಹಾಗೂ ಎಕ್ಸಾತ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಲಿವೆ ಎಂದು ಅವರು ಘೋಷಿಸಿದರು.
ಪರಿಸರ ಸಂರಕ್ಷಣೆಯ ಈ ಮಹತ್ವದ ಕಾರ್ಯದಲ್ಲಿ ಭಾಗವಹಿಸಿ ಸಹಕರಿಸಿದ ಪ್ರತಿಯೊಬ್ಬರಿಗೂ ಹಮೀದ್ ಯೂಸುಫ್ ಮತ್ತು ರೋಶನ್ ರೋಡ್ರಗೀಸ್ ರವರು ಕೃತಜ್ಞತೆ ಸಲ್ಲಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions