ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ನ್ಯೂಸ್ ನೆಕ್ಸ್ಟ್ ವೆಬ್ ಚಾನೆಲ್ ಸೇರಿದಂತೆ ಇತರರ ವಿರುದ್ಧ ತಾನು ದಾಖಲಿಸಿದ ಪ್ರಕರಣದ ಹಿನ್ನೆಲೆ ಕೆಲವರು ತನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಅಜಿತ್ ಶೆಟ್ಟಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಂತಹ ಒತ್ತಡಗಳಿಗೆ ತಾನು ಬಗ್ಗುವ ವ್ಯಕ್ತಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಅಧಿಕಾರಿಯ ವರ್ಗಾವಣೆಯಲ್ಲಿಯೂ ಹಣ ಪಡೆದಿದ್ದೇನೆ ಎಂಬ ಆರೋಪ ಸಂಪೂರ್ಣ ಸುಳ್ಳು ಎಂದು ಖಂಡಿಸಿದ ಅವರು, ಈ ಬಗ್ಗೆ ಆರೋಪ ಮಾಡುತ್ತಿರುವ ನ್ಯೂಸ್ ನೆಕ್ಸ್ಟ್ ಚಾನೆಲ್‌ನ ಪ್ರನೂತ್ ಗಾಣಿಗ ತಮ್ಮ ಹೇಳಿಕೆಗೆ ಸಾಬೀತು ನೀಡಬೇಕು ಎಂದು ಸವಾಲು ಹಾಕಿದ್ದಾರೆ.
ಇದೇ ಸಂದರ್ಭದಲ್ಲಿ, ತನ್ನ ಬಳಿ ₹22,50,000 ಹಣ ಬೇಡಿಕೆ ಇಟ್ಟಿರುವ ವಿಚಾರವನ್ನು ತಾನು ಈಗಾಗಲೇ ವಿಡಿಯೋ ಮೂಲಕ ಬಹಿರಂಗಪಡಿಸಿದ್ದೇನೆ ಎಂದು ತಿಳಿಸಿದ್ದಾರೆ.
ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ ವರ್ಗಾವಣೆ ದಂಧೆ ಆರೋಪ ಹೊರಿಸುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಅಜಿತ್ ಶೆಟ್ಟಿ ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions