ರಕ್ಷಣಾಪುರ ಜವನೆರ್ ಕಾಪು, ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆಯವರ ಸಾರಥ್ಯದಲ್ಲಿ ನಿನ್ನೆ ಕಾಪುವಿನಲ್ಲಿ ನಡೆದ "ಪಿಲಿ ಪರ್ಬ" ಕಾರ್ಯಕ್ರಮದಲ್ಲಿ ಕೆಲವು ಸಾಧಕರಿಗೆ ಸನ್ಮಾನಿಸಲಾಯಿತು.
ಅದರಲ್ಲಿ ಅತ್ಯಂತ ಕಿರಿಯ ವಯಸ್ಲಿನಲ್ಲಿ ಕಬಡ್ಡಿ ಕ್ರೀಡೆಯಲ್ಲಿ ತನ್ನ ಚಾಪು ಮೂಡಿಸಿ ಚುರುಕಿನ ಆಟದಿಂದ ಹಲವಾರು ಜಿಲ್ಲಾ ಮಟ್ಟದ ರಾಜ್ಯ ಮಟ್ಟದ ಪಂದ್ಯಗಳನ್ನು ಆಡಿ ಪ್ರಶಸ್ತಿಗಳನ್ನು ಗೆದ್ದು ಹೆಸರುಗಳಿಸಿ ಕ್ರೀಡಾಭಿಮಾನಿಗಳ ಮನಗೆದ್ದ ಭರವಸೆಯ ಆಟಗಾರ, ರಾಷ್ಟ್ರೀಯ ಅಂತರ್ ರಾಷ್ಟ್ರೀಯ ಮಟ್ಟದ ಆಟಗಾರನಾಗುವ ಎಲ್ಲಾ ಲಕ್ಷಣಗಳುಳ್ಳ ಕಾಪುವಿನ ಹುಡುಗ ಮಹಮ್ಮದ್ ಝಿಯಾದ್ ನನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಪಕ್ಷದ ನಾಯಕರಾದ ಇನಾಯತ್ ಅಲಿ , ಪ್ರಸಾದ್ ರಾಜ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ವೈ ಸುಕುಮಾರ್, ನಿಯಾಝ್ ಇನ್ನಿತರ ನಾಯಕರು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions