ಆದರ್ಶ ಆಸ್ಪತ್ರೆ ಉಡುಪಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ, ಎಸ್ ಡಿಪಿಐ ಉಡುಪಿ, ಉಡುಪಿ ಬಸವ ಸಮಿತಿ (ರಿ.) ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.), ಎಚ್ ಡಿ ಎಫ್ ಸಿ ಬ್ಯಾಂಕ್ ಪ್ರಧಾನ ಶಾಖೆ ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಇಂದು ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಜಿ.ಎಸ್. ಚಂದ್ರಶೇಖರ್ ಅವರು, ರಕ್ತಕ್ಕೆ ಪರ್ಯಾಯವಾಗಿ ಯಾವುದೇ ಕೃತಕ ವಸ್ತುವಿಲ್ಲ. ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಸೇರಿದಂತೆ ವಿವಿಧ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ಆದ್ದರಿಂದ ಆರೋಗ್ಯವಂತ ನಾಗರಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಘಟಕದ ಮುಖ್ಯಸ್ಥರಾದ ಡಾ. ವೀಣಾ ಅವರು ಮಾತನಾಡಿ, ರಕ್ತದಾನ ಮಾಡುವುದರಿಂದ ಯಾವುದೇ ರೀತಿಯ ಭಯ ಅಥವಾ ತಪ್ಪು ಕಲ್ಪನೆಗಳಿಗೆ ಒಳಗಾಗದೆ ಅರ್ಹ ಹಾಗೂ ಆರೋಗ್ಯವಂತರು ನಿಯಮಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದರು.



ಎಸ್ ಡಿ ಪಿ ಐ ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಮಹಮ್ಮದ್ ಅಶ್ರಫ್ ಬಾವ, ಆದರ್ಶ ಆಸ್ಪತ್ರೆಯ ಸಿಇಒ ವಿಮಲಾ ಚಂದ್ರಶೇಖರ್, ಹೆಚ್ ಡಿ ಎಫ್ ಸಿ ಉಡುಪಿ ಪ್ರಧಾನ ಶಾಖೆಯ ಮುಖ್ಯ ವ್ಯವಸ್ಥಾಪಕರಾದ ವಿಶ್ವಮೂರ್ತಿ ಪಡುಬಳ್ಳಿ, , ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.), ಉಡುಪಿ ಜಿಲ್ಲೆ ಅಧ್ಯಕ್ಷರಾದ ಪ್ರಕಾಶ್ ಸಜ್ಜನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು. ರೀಮಾ ಧನ್ಯವಾದವಿತ್ತರು.
ಶಿಬಿರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ವಿಶೇಷ ಗಮನ ಸೆಳೆಯಿತು. ವಿವಿಧ ವರ್ಗದ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ಮೆರೆದರು. ಶಿಬಿರದಲ್ಲಿ ಸುಮಾರು ನೂರಕ್ಕೂ ಅಧಿಕ ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions