ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಾಪುರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಯು ಚಾನೆಲ್ ನ ನಾಗರಾಜ ರಾಯಪ್ಪನಮಠ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕ ದ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಅಸ್ಟ್ರೋ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕುಂದಾಪುರದ ಕೋಯ ಕುಟ್ಟಿ ಹಾಲ್ ನಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರುಗಳಾಗಿ ಉದಯವಾಣಿಯ ಸತೀಶ್ ಆಚಾರ್ ಮತ್ತು ಕುಂದ ಪ್ರಭದ ಸಂತೋಷ್ ಕುಂದೇಶ್ವರ, ಕೋಶಾಧಿಕಾರಿಯಾಗಿ ಕನ್ನಡ ಪ್ರಭಾದ ಶ್ರೀಕಾಂತ್ ಹೆಮ್ಮಾಡಿ, ಕಾರ್ಯದರ್ಶಿಗಳಾಗಿ ವಿಜಯವಾಣಿಯ ಮಂಜುನಾಥ ಶೆಣೈ ಜನ್ನಾಡಿ ಹಾಗೂ ದಾಯ್ಜಿ ವಲ್ಡ್೯ ನ ರಾಘವೇಂದ್ರ ಬಿ. ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಪ್ರಶಾಂತ್ ಪಾದೆ, ನಾಗರಾಜ ವಂಡ್ಸೆ, ಶ್ರೀಕರ್ ಎಸ್., ಸತೀಶ್ ಎಂ.ಬಿ., ವಿನಯ ಪಾಯಸ್, ಎಂ.ನಿತ್ಯಾನಂದ, ಸಂತೋಷ್ ಶೆಟ್ಟಿ, ಜಗದೀಶ್ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಚಂದ್ರಶೇಖರ ಚಾಲುಕ್ಯ ಯೋಗೀಶ್ ಕುಂಭಾಶಿ ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions