Advertisement

ಉಡುಪಿ | ಸೆ - 3 ರಿಂದ 14, ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್"- ರಾಜ್ಯವ್ಯಾಪಿ ಅಭಿಯಾನ

ರಬ್ಬಿಲ್ ಅವ್ವಲ್ ತಿಂಗಳಲ್ಲಿ ವಿಶೇಷವಾಗಿ ಪ್ರವಾದಿ ಮುಹಮ್ಮದ್ ಅವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್(ಸ) ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ 14ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾದಿ ಮುಹಮ್ಮದ್(ಸ)ರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್, ಉಡುಪಿ ನಗರ ಶಾಖೆಯ ಅಧ್ಯಕ್ಷ ನಿಸಾರ್ ಅಹ್ಮದ್ ಹೇಳಿದರು.

ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ಉಡುಪಿ ಜಿಲ್ಲೆಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ, ಸಾರ್ವಜನಿಕ ಸಭೆ, ಚರ್ಚಾಕೂಟ, ಚಹಾಕೂಟ, ಪುಸ್ತಕ ಬಿಡುಗಡೆ, ಆಸ್ಪತ್ರೆ ಭೇಟಿ-ರೋಗಿ ಸಂದರ್ಶನ, ವೃದ್ದಾಶ್ರಮ-ಅನಾಥಾಲಯ ಭೇಟಿ, ಹಣ್ಣು, ಹಂಪಲು ವಿತರಣೆ, ಪ್ರಬಂಧ ಸ್ಪರ್ಧೆ, ವೈದ್ಯಕೀಯ ತಪಾಸಣಾ ಶಿಬಿರಗಳಂತಹಾ ಕಾರ್ಯಕ್ರಮಗಳು ನಡೆಸಲಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಭಿಯಾನ ಸಂಚಾಲಕರಾದ ಫಾರೂಕ್ ಮಣಿಪಾಲ, ಸ್ವಾಗತ ಸಮಿತಿಯ ಸದಸ್ಯರುಗಳಾದ ಸುಂದರ್ ಮಾಸ್ತರ್, ಚಾರ್ಲ್ಸ್ ಆಂಗ್ಲರ್, ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ರಈಸ್ ಅಹಮದ್, ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಮಹಿಳಾ ಸಂಚಾಲಕಿ ವಾಜಿದಾ ತಬಸ್ಸುಮ್, ಇಸ್ಟಾಕ್ ಕಿದೆವರ್, ಸಮೀರ್, ಅಝೀಜ್‌ ಉದ್ಯಾವರ್‌ ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions