ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಕುಂದಾಪುರ ತಾಲೂಕು ಚಿತ್ತೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಮೀಸಲಾತಿ-ಸಾಮಾನ್ಯ) ಸ್ಥಾನವನ್ನು ಆಯ್ಕೆ ಮಾಡುವ ಸಲುವಾಗಿ ಗೊತ್ತುಪಡಿಸಿದ ಅಧಿಕಾರಿಯಾಗಿ ಕುಂದಾಪುರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ, ಮೊ.ನಂ: 9449143880 ಹಾಗೂ ಹಂಗಳೂರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ (ಮೀಸಲಾತಿ-ಸಾಮಾನ್ಯ) ಸ್ಥಾನವನ್ನು ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಕುಲಾಲ ಮೊ.ನಂ: 9113288169 ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರ ವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions