ಉಡುಪಿ: ಕೇವಲ 32 ವರ್ಷಗಳ ಕಾಲ ಬದುಕಿದ ಆಚಾರ್ಯ ಶ್ರೀ ಶಂಕರರು ತಮ್ಮ ಅಲ್ಪಾಯುಷ್ಯದಲ್ಲಿಯೇ ಅಪಾರ ಸಾಧನೆ ಮಾಡಿದರು. ಎಂಟನೇ ವಯಸ್ಸಿನಲ್ಲಿ ಚತುರ್ವೇದ ಪಾರಂಗತರಾಗಿ, 12ನೇ ವಯಸ್ಸಿನಲ್ಲಿ ಸರ್ವಶಾಸ್ತ್ರ ಸಂಪನ್ನರಾದ ಅವರು ಮೂರು ಬಾರಿ ಭರತಖಂಡವನ್ನು ಕಾಲ್ನಡಿಗೆಯಲ್ಲಿ ಸಂಚರಿಸಿ, ವೇದಾಂತಿಗಳನ್ನು ವಾದ-ತರ್ಕಗಳಲ್ಲಿ ಸೋಲಿಸಿ, ಅನೇಕ ಭಾಷ್ಯ ಗ್ರಂಥಗಳನ್ನು ರಚಿಸುವ ಮೂಲಕ ಕಳೆಗುಂದಿದ್ದ ಸನಾತನ ಧರ್ಮದ ಪುನರುತ್ಥಾನಕ್ಕೆ ಮಹತ್ವದ ಕೊಡುಗೆ ನೀಡಿದರು ಎಂದು ವಿದ್ವಾಂಸ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ಮಂಜುನಾಥ ಭಟ್ ಹೇಳಿದರು.
ಡಿ. 28ರಿಂದ ಉಡುಪಿಯಲ್ಲಿ ನಡೆಯಲಿರುವ ಶ್ರೀ ಶಂಕರ ವಿಜಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಕಾಪು ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶೃಂಗೇರಿ ಮಠದ ಉಡುಪಿ ಪ್ರಾಂತೀಯ ಧರ್ಮಾಧಿಕಾರಿ ವಾಗೀಶ ಶಾಸ್ತ್ರಿ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಒಟ್ಟು 17 ತಾಲೂಕುಗಳಲ್ಲಿ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸ್ಪರ್ಧಾ ಸಂಘಟಕಿ ಡಾ. ಪ್ರಜ್ಞಾ ಮಾರ್ಪಳ್ಳಿ ಉಪಸ್ಥಿತರಿದ್ದರು. ಸ್ಪರ್ಧೆಗಳ ಸಂಚಾಲಕ ಕೃಷ್ಣಕುಮಾರ್ ರಾವ್ ಮಟ್ಟು ಸ್ವಾಗತಿಸಿದರು. ಡಾ. ರಾಘವೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಸಂಘಟಕ ಶ್ರೀನಿವಾಸ ರಾವ್ ಕಾಪು ವಂದಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾಪು ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಿಂದ ಆಗಮಿಸಿದ್ದ 89 ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗುರುತಿಸಿ ಬಹುಮಾನ ನೀಡಿ ಗೌರವಿಸಲಾಯಿತು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions