ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ರ ಪ್ರಯುಕ್ತ ಅಕ್ಟೋಬರ್ 2 ರಂದು ಬೃಹತ್ ಶೋಭಾಯಾತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಟಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆಯನ್ನು ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳು ಸಂಜೆ 05.00 ಗಂಟೆಯಿMದ ರಾತ್ರಿ 9.00 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವಾ-ಬೆಳ್ಳಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು. ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವಾ-ಬೆಳ್ಳಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸಬೇಕು. ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9.00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸಬೇಕು.
ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪುಯಾಣಿಕ ಬಸ್ಸುಗಳು ರಾತ್ರಿ 9.00 ಗಂಟೆ ನಂತರ ಉಡುಪಿಯಿಂದ ಸಂಚರಿಸಬೇಕು. ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳಿಗೆ ಸಂಜೆ 5.00 ರಿಂದ ರಾತ್ರಿ 10.00 ಗಂಟೆವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ
221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions