ಮಣಿಪಾಲ, ಆ.24: ಮನೆಯಲ್ಲಿ ಯಾರಿಲ್ಲದ ಸಮಯದಲ್ಲಿ ವೃದ್ಧರೊಬ್ಬರು, ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು, ಶನಿವಾರದಂದು ಮಣಿಪಾಲ ಪೋಲಿಸ್ ಠಾಣೆ ವ್ಯಾಪ್ತಿಯ ಕರ್ವಾಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಚಂದು ದೇವಾಡಿಗ (75ವ) ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿದ್ದು ಎಎಸ್ಐ ಮನೋಹರ್, ಮುಖ್ಯ ಆರಕ್ಷಕರಾದ ಸುರೇಶ್ ಶೆಟ್ಟಿ , ಜ್ಯೋತಿ ಮಹಜರು ಪ್ರಕ್ರಿಯೆ ನಡೆಸಿದರು. ಶವವನ್ನು ಕೆಎಂಸಿ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಉಚಿತ ಆಂಬುಲೆನ್ಸ್ ಸೇವೆ ಒದಗಿಸಿದರು. ಶ್ರೀಕಾಂತ್ ನಾಯ್ಕ್ ಸಹಕರಿಸಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions