ಉಡುಪಿ ನಗರದ ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು, ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಕಾರಣ ಎನೆಂದು ತಿಳಿದುಬಂದಿಲ್ಲ.
ಪರಿಸರದ ಸುತ್ತಮುತ್ತಲಿನ ನಾಗರಿಕರು ಚಿಕಿತ್ಸೆ ಪಡೆಯಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಿಶುಗಳಿಗೆ ಲಸಿಕೆ, ಚುಚ್ಚುಮದ್ದು ಹಾಗೂ ಗರ್ಭಿಣಿಯರಿಗೆ ತಪಾಸಣೆ, ಅಗತ್ಯ ಚಿಕಿತ್ಸೆಗಳು ಕ್ಲಪ್ತ ಸಮಯದಲ್ಲಿ ದೊರೆಯುತಿತ್ತು. ಅಲ್ಲದೆ ಜ್ವರಬಾಧೆ, ಶೀತ, ಕೆಮ್ಮು ಮೊದಲಾದ ವ್ಯಾಧಿಗಳಿಂದ ಬಳಲುವ ರೋಗಿಗಳು ಚಿಕಿತ್ಸೆ ಪಡೆಯಲು ಅವಕಾಶವಿತ್ತು. ಎದುರಾಗಿರುವ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಹಣತೆತ್ತು ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಬಡ ಕುಟುಂಬಗಳ ಶಿಶುಗಳಿಗೆ, ಗರ್ಭಿಣಿಯರಿಗೆ, ರೋಗಿಗಳಿಗೆ ಎದುರಾಗಿದೆ. ಸರಕಾರದ ಉಚಿತ ಚಿಕಿತ್ಸಾ ಸೇವೆಯನ್ನು ಪಡೆಯಲು, ನಾಗರೀಕ ಸಮಾಜವು ವಂಚಿತವಾಗದಂತೆ ತಡೆಯಬೇಕಾಗಿದ್ದು ಆಡಳಿತ ವ್ಯವಸ್ಥೆಗಳ ಕರ್ತವ್ಯವಾಗಿದೆ. ತಕ್ಷಣ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆಯು, ಕರ್ತವ್ಯ ನಿಲ್ಲಿಸಿರುವ ಕುಕ್ಕಿಕಟ್ಟೆಯ ನಗರ ಕುಟುಂಬ ಕಲ್ಯಾಣ ಕೇಂದ್ರವನ್ನು ಪುನಾರಂಭಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions