ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಹಣಾ ಅಧ್ಯಕ್ಷರಾದ ಡಾ.ಟಿ.ಶಾಂ ಭಟ್ ಹಾಗೂ ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಫೆಬ್ರವರಿ 18 ಮತ್ತು 19 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಆಯೋಗದ ಮುಂದೆ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ನಡೆಸುವುದರ ಜೊತೆಗೆ ಮಾನವ ಹಕ್ಕು ಉಲ್ಲಂಘನೆಗಳಿಗೆ ಸಂಬAಧಿಸಿದ ಹೊಸ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಫೆ. 19 ರಂದು ಮಣಿಪಾಲದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪೂರ್ಣ ಪೀಠ ಸಭೆಗಳನ್ನು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಹಾಗೂ ಮಾನವ ಹಕ್ಕು ಉಲ್ಲಂಘನೆಗಳಿಗೆ ಸಂಬAಧಿಸಿದAತೆ ಸಾರ್ವಜನಿಕರಿಂದ ಹೊಸ ದೂರುಗಳನ್ನು ಸ್ವೀಕರಿಸಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಈ ದಿನದಂದು ಸಲ್ಲಿಸಬಹುದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions