Advertisement

ವಿಶ್ವಕರ್ಮರ ಪರಂಪರಾಗತ ಜ್ಞಾನ ಮುಂದಿನ ಪೀಳಿಗೆಗೆ ತಲುಪಲಿ : ಶಾಸಕ ಯಶ್‌ಪಾಲ್ ಎ ಸುವರ್ಣ

ಸಾವಿರಾರು ವರ್ಷಗಳ ಹಿಂದೆ ತಂತ್ರಜ್ಞಾನವೇ ಇಲ್ಲದ ಕಾಲದಲ್ಲಿ ಇಡೀ ವಿಶ್ವವನ್ನು ತನ್ನ ಕೈಚಳಕದ ಮೂಲಕ ನಿರ್ಮಿಸಿ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಸರ್ವರ ಆರಾಧ್ಯ ದೈವ ವಿಶ್ವಕರ್ಮರ ಜಯಂತಿಯನ್ನು ಆಚರಿಸಿ ಮುಂದಿನ ಪೀಳಿಗೆಗೆ ಅವರ ಜ್ಞಾನವನ್ನು ದಾಟಿಸುವ ಉದ್ದೇಶದಿಂದ ಸರಕಾರದ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿ 2025 ಅನ್ನು ಉದ್ಘಾಟಿಸಿ, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ವಿಶ್ವಕರ್ಮ ಸಮಾಜದ ಶ್ರೇಯೋಭಿವೃದ್ಧಿಗಾಗಿ 18 ವಿವಿಧ ಕುಲ ಕಸುಬುಗಳನ್ನು ಒಂದೆಡೆ ಸೇರಿಸಿ ಪಿಎಂ-ವಿಶ್ವಕರ್ಮ ಯೋಜನೆಯನ್ನು ಜಾರಿ ಮಾಡಲಾಗಿದೆ. ವಿಶ್ವಕರ್ಮ ಸಮಾಜದ ಪರಂಪರಾಗತ ಜ್ಞಾನವನ್ನು ಮುಂದಿನ ಪೀಳಿಗೆಗೆ ತಿಳಿಸಿ ಕೊಡುವ ನಿಟ್ಟಿನಲ್ಲಿ ಮತ್ತು ದೇಶದ ಪಾರಂಪರಿಕ ಕುಲ ಕಸುಬುಗಳಿಗೆ ಬಲ ತುಂಬುವಲ್ಲಿ ಈ ಯೋಜನೆ ಸಹಕಾರಿಯಾಗಲಿದೆ ಎಂದರು.

ಕರಾವಳಿಯ ಅಭಿವೃದ್ಧಿಯಲ್ಲಿಯೂ ಈ ಸಮಾಜದ ಕೊಡುಗೆ ಬಹಳಷ್ಟಿದೆ. ಇಲ್ಲಿನ ದೇಗುಲಗಳ ನಿರ್ಮಾಣ ಮತ್ತು ಜೀರ್ಣೋದ್ದಾರ

ಕಾರ್ಯಗಳಲ್ಲಿ ಸಮಾಜದ ಕರಕುಶಲತೆ ಎದ್ದು ಕಾಣುತ್ತದೆ. ಜಿಲ್ಲೆಯ ಕುಶಲ ಕರ್ಮಿಗಳಿಗೆ ನ್ಯಾಯ ಒದಗಿಸಲು ಪ್ರಥಮ ಆದ್ಯತೆ ನೀಡುವ

ಮೂಲಕ ಅವರ ಬದುಕು ಕಟ್ಟಲು ಜನರು ಕೂಡಾ ನೆರವಾಗಬೇಕು. ಮುಂದಿನ ದಿನಗಳಲ್ಲಿ ವಿಜೃಂಭಣೆಯಿಂದ ವಿಶ್ವಕರ್ಮ ಜಯಂತಿಯನ್ನು ಆಚರಿಸಿ ಹೆಚ್ಚು ಯುವಕರು ಪಾಲ್ಗೊಳ್ಳುವಂತೆ ಕಾರ್ಯಕ್ರಮ ರೂಪಿಸಬೇಕು ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ವಿಶ್ವಕರ್ಮರು ಅತ್ಯಂತ ಶ್ರೇಷ್ಠ ಮತ್ತು ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಜನ

ಮಾನಸದಲ್ಲಿ ಅವರ ಬಗ್ಗೆ ವಿಶಿಷ್ಟ ನಂಬಿಕೆ ಇದೆ. ಶ್ರೀಕೃಷ್ಣನ ದ್ವಾರಕೆ ಸೇರಿದಂತೆ ಜಗತ್ತಿನ ಎಲ್ಲ ಅದ್ಭುತಗಳನ್ನು ವಿಶ್ವಕರ್ಮರು ರಚನೆ

ಮಾಡಿರುವ ಬಗ್ಗೆ ಪೌರಾಣಿಕ ಉಲ್ಲೇಖಗಳಿವೆ. ಆಧುನಿಕತೆಯ ಭರಾಟೆಯಲ್ಲಿ ಅಕ್ಕಸಾಲಿಗ, ಕುಂಬಾರ, ಬಡಗಿ, ಮಡಿವಾಳ, ನೇಕಾರ ಸೇರಿದಂತೆ ಹಲವು ಕುಲ ಕಸುಬುಗಳು ಅಳಿವಿನತ್ತ ಸಾಗುತ್ತಿದ್ದು ಇವುಗಳ ಪುನಶ್ಚೇತನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶ್ವ ಕರ್ಮ ಯೋಜನೆ ಜಾರಿಗೊಳಿಸಿದ್ದು ಮುಂದಿನ ಜನಾಂಗವನ್ನು ಈ ಕ್ಷೇತ್ರಗಳತ್ತ ಆಕರ್ಷಿಸುವ ಕಾರ್ಯ ನಡೆಯುತ್ತಿದೆ ಎಂದರು.

ನಿಟ್ಟೆ ಆಪ್ಟ್ಸಾಫ್ಟ್ ಟೆಕ್ನಾಲಜೀಸ್ ಸಂಸ್ಥಾಪಕ ಹರ್ಷವರ್ಧನ ನಿಟ್ಟೆ ವಿಶ್ವಕರ್ಮರ ಕುರಿತು ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ನುರಿತ 5 ಹಿರಿಯ ಕುಶಲ ಕರ್ಮಿಗಳನ್ನು ಸನ್ಮಾನಿಸಲಾಯಿತು. ಸೆ.17 ರಿಂದ ಅ.2 ರವರೆಗೆ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ನಡೆಯಲಿರುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್

ಕದ್ರೋಳ್ಳಿ, ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ನಗರಾಭಿವೃಧ್ದಿ ಕೋಶದ ಯೋಜನಾಧಿಕಾರಿ ಸುಬ್ರಮಣ್ಯ ಶೆಟ್ಟಿ, ವಿಶ್ವಕರ್ಮ

ಒಕ್ಕೂಟದ ಉಡುಪಿ ಮತ್ತು ದ.ಕ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಡಾ.ಪ್ರತಿಮಾ ಜಯಪ್ರಕಾಶ್ ಆಚಾರ್ಯ ನಿರೂಪಿಸಿ ವಂದಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions